ಪ್ರಧಾನಿ ಮೋದಿ ತೆಲಂಗಾಣ ಭೇಟಿ: ಮೂಲಭೂತ ಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ

ತೆಲಂಗಾಣ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಸುಮಾರು 6,100 ಕೋಟಿ ರೂಪಾಯಿ ಮೌಲ್ಯದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ವಾರಂಗಲ್: ತೆಲಂಗಾಣ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಸುಮಾರು 6,100 ಕೋಟಿ ರೂಪಾಯಿ ಮೌಲ್ಯದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ, ಬಿಜೆಪಿ ಸಂಸದ ಬಂಡಿ ಸಂಜಯ್ ಕುಮಾರ್ ಮತ್ತು ಇತರ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಗಡ್ಕರಿ, ಮೋದಿ ಅವರು ದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ತೆಲಂಗಾಣದಲ್ಲಿ ಇದುವರೆಗೆ 1.10 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಸೌಕರ್ಯ ಯೋಜನೆಗಳು ಪೂರ್ಣಗೊಂಡಿವೆ ಇನ್ನು ಕೆಲವು ಚಾಲ್ತಿಯಲ್ಲಿವೆ ಮತ್ತು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

2024 ರ ಅಂತ್ಯದ ವೇಳೆಗೆ ತೆಲಂಗಾಣ ರಾಜ್ಯದಲ್ಲಿ 2 ಲಕ್ಷ ಕೋಟಿ ರೂಪಾಯಿಗಳ ಯೋಜನೆಗಳನ್ನು ಹೊಂದುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವರು ಹೇಳಿದರು.

500 ಕೋಟಿಗೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿರುವ ರೈಲ್ವೇ ವ್ಯಾಗನ್ ತಯಾರಿಕಾ ಘಟಕವನ್ನು ಶಂಕುಸ್ಥಾಪನೆ ನೆರವೇರಿಸಿದ ಯೋಜನೆಗಳಾಗಿದ್ದು, ಆಧುನಿಕ ಉತ್ಪಾದನಾ ಘಟಕವು ವರ್ಧಿತ ವ್ಯಾಗನ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿರುತ್ತದೆ.ಇದು ಉದ್ಯೋಗ ಸೃಷ್ಟಿಗೆ ಮತ್ತು ಹತ್ತಿರದ ಪ್ರದೇಶಗಳಲ್ಲಿ ಪೂರಕ ಘಟಕಗಳ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಕೇಂದ್ರ ಪ್ರವಾಸೋದ್ಯಮ ಸಚಿವರು ಮತ್ತು ಹೊಸದಾಗಿ ನೇಮಕಗೊಂಡ ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ ಮತ್ತು ಇತರ ನಾಯಕರೊಂದಿಗೆ ಬಂದ ಮೋದಿ ಅವರು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಇದಕ್ಕೂ ಮುನ್ನ ವಿಶೇಷ ವಿಮಾನದ ಮೂಲಕ ಹೈದರಾಬಾದ್‌ಗೆ ಆಗಮಿಸಿದ ಪ್ರಧಾನಿ, ಹೆಲಿಕಾಪ್ಟರ್‌ನಲ್ಲಿ ವಾರಂಗಲ್ ತಲುಪಿದರು.

ಇದಕ್ಕೂ ಮೊದಲು, ಕಾಕತೀಯ ಸಾಮ್ರಾಜ್ಯದ ರಾಜಧಾನಿ ಐತಿಹಾಸಿಕ ವಾರಂಗಲ್‌ನಲ್ಲಿರುವ ಪ್ರಸಿದ್ಧ ಭದ್ರಕಾಳಿ ದೇವಿಯ ದೇವಸ್ಥಾನದಲ್ಲಿ ಮೋದಿ ಪ್ರಾರ್ಥನೆ ಸಲ್ಲಿಸಿದರು.

ವಾರಂಗಲ್‌ಗೆ ತೆರಳುವ ಮುನ್ನ ಮೋದಿ ಟ್ವೀಟ್‌ ಮಾಡಿ, ನಾವು 6,100 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಅಥವಾ ಶಂಕುಸ್ಥಾಪನೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಾರಂಗಲ್‌ಗೆ ಹೊರಟಿದ್ದೇವೆ. ಈ ಕಾಮಗಾರಿಗಳು ಹೆದ್ದಾರಿಗಳಿಂದ ರೈಲ್ವೆವರೆಗಿನ ವಿವಿಧ ಕ್ಷೇತ್ರಗಳನ್ನು ಒಳಗೊಂಡಿವೆ ಎಂದು ಬರೆದುಕೊಂಡಿದ್ದಾರೆ. 

ಕೇಂದ್ರದ ಎನ್‌ಡಿಎ ಸರ್ಕಾರವು ಕಳೆದ 9 ವರ್ಷಗಳಲ್ಲಿ ತೆಲಂಗಾಣ ವಿರೋಧಿಯಾಗಿದೆ ಎಂದು ಆರೋಪಿಸಿರುವ ಆಡಳಿತಾರೂಢ ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ ಟಿ ರಾಮರಾವ್ ಅವರು ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯನ್ನು ಬಹಿಷ್ಕರಿಸುವುದಾಗಿ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com