ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ: ವ್ಯಕ್ತಿಯ ಬಂಧನ

ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಲಖನೌ ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಮುಖ್ಯಮಂತ್ರಿಗಳು ಮತ್ತು ಪೊಲೀಸರ ಸಹಾಯವಾಣಿ ಸಂಖ್ಯೆಗೆ ಹುಸಿ ಕರೆ ಮಾಡಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ: ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಲಖನೌ ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಮುಖ್ಯಮಂತ್ರಿಗಳು ಮತ್ತು ಪೊಲೀಸರ ಸಹಾಯವಾಣಿ ಸಂಖ್ಯೆಗೆ ಹುಸಿ ಕರೆ ಮಾಡಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಹುಸಿ ಕರೆ ಮಾಡಿದ್ದ ರಮೇಶ್ ಶುಕ್ಲಾ ಎಂಬಾತನನ್ನು ಬಂಧಿಸಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ನಿವಾಸ್ ಮಿಶ್ರಾ ಮಾಹಿತಿ ನೀಡಿದ್ದಾರೆ. 

ಬಾಂಬ್ ಬೆದರಿಕೆ ಕರೆ ಹಿನ್ನೆಲೆಯ ಲಖನೌದ ಹಜರತ್‌ಗಂಜ್ ಮೆಟ್ರೋ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಿ, ಬಾಂಬ್ ನಿಷ್ಕ್ರಿಯ ದಳವನ್ನು ನಿಯೋಜಿಸಲಾಗಿತ್ತು. ನಂತರ ಅದು ಹುಸಿ ಕರೆ ಎಂಬುದು ದೃಢಪಟ್ಟಿತು ಎಂದು ಅಧಿಕಾರಿಗಳು ಹೇಳಿದ್ದಾರೆ. 

ಶುಕ್ರವಾರ ರಾತ್ರಿಯೇ ಸಿಎಂ ಮತ್ತು ಪೊಲೀಸರ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿದ ಆರೋಪಿ, ದಿನೇಶ್ ತಿವಾರಿ ಎಂಬಾತ ಲಕ್ನೋದಲ್ಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸಲು ಹೊರಟಿದ್ದಾನೆ ಎಂದು ಹೇಳಿದ್ದಾನೆ. ದಿನೇಶ್ ಗೂ ಕರೆಗೂ ಯಾವುದೇ ಸಂಬಂಧವಿಲ್ಲ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಆದರೆ, ಆತನನ್ನು ಇಕ್ಕಟ್ಟಿಗೆ ಸಿಲುಕಿಸಲು ರಮೇಶ್ ಈ ರೀತಿಯ ಹುಸಿ ಕರೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com