ಪ್ರತಿಕೂಲ ಹವಾಮಾನ: ಅಮರನಾಥ ಯಾತ್ರೆ ಮತ್ತೆ ಸ್ಥಗಿತ

ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಭಾನುವಾರ ಪುನರಾರಂಭಗೊಂಡಿದ್ದ ಅಮರನಾಥ ಯಾತ್ರೆಯನ್ನು ಸೋಮವಾರ ಮತ್ತೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಮ್ಮು: ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಭಾನುವಾರ ಪುನರಾರಂಭಗೊಂಡಿದ್ದ ಅಮರನಾಥ ಯಾತ್ರೆಯನ್ನು ಸೋಮವಾರ ಮತ್ತೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಗವತಿ ಕ್ಯಾಂಪ್‌ನಲ್ಲಿ 6 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಹಾಗೂ ಚಂದೆರಕೋಟ್‌ ಕ್ಯಾಂಪ್‌ನಲ್ಲಿ 5 ಸಾವಿರ ಯಾತ್ರಿಕರು ಸಿಲುಕಿಕೊಂಡಿದ್ದಾರೆ.

ಹೊಸದಾಗಿ ಯಾವುದೇ ತಂಡಗಳಿಗೆ ಜಮ್ಮು ಕಾಶ್ಮೀರದ ಕ್ಯಾಂಪ್‌ಗಳಿಗೆ ಬರಲು ಅವಕಾಶ ನೀಡಲಾಗುತ್ತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ನಡುವೆ ಭಾನುವಾರ ಅಮರನಾಥ ಯಾತ್ರೆ ಪುನರಾರಂಭಗೊಂಡಿದ್ದ ಹಿನ್ನೆಲೆಯಲ್ಲಿ ಒಟ್ಟು 90 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥದ ಗುಹಾ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.

40 ಸಾವಿರಕ್ಕೂ ಹೆಚ್ಚು ಭಕ್ತರು ಶನಿವಾರ ಯಾತ್ರೆಯನ್ನು ಸ್ಥಗಿತಗೊಳಿಸುವ ಮೊದಲು ಏಳು ತಂಡಗಳಲ್ಲಿ ಜಮ್ಮುವಿನಿಂದ ಕಾಶ್ಮೀರಕ್ಕೆ ತೆರಳಿದ್ದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com