ಥಾಣೆ: ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕ್ಲಿನಿಕ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ವೈದ್ಯ

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 23 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ತನ್ನ ಕ್ಲಿನಿಕ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 23 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ತನ್ನ ಕ್ಲಿನಿಕ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಮಧ್ಯಾಹ್ನ ಬದ್ಲಾಪುರ ಪಶ್ಚಿಮ ಪ್ರದೇಶದಲ್ಲಿನ ವೈದ್ಯರ ಕ್ಲಿನಿಕ್‌ನಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಂತ್ರಸ್ತೆ ತನ್ನ ಮನೆಯಿಂದ ಕೆಲವು ಅಗತ್ಯ ವಸ್ತುಗಳನ್ನು ಖರೀದಿಸಲು ವೈದ್ಯರ ಕ್ಲಿನಿಕ್ ಬಳಿಯ ಅಂಗಡಿಗೆ ತೆರಳಿದ್ದ ವೇಳೆ ಕ್ಲಿನಿಕ್ ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಸಹಾಯಕ ಪೊಲೀಸ್ ಆಯುಕ್ತ(ಅಂಬರ್ನಾಥ್ ವಲಯ) ಸುರೇಶ್ ವರಾಡೆ ಅವರು ತಿಳಿಸಿದ್ದಾರೆ.

ಮಹಿಳೆ ಮನೆಗೆ ಹಿಂತಿರುಗದಿದ್ದಾಗ, ಆಕೆಯ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ವೈದ್ಯರ ಚಿಕಿತ್ಸಾಲಯದ ಹೊರಗೆ ಮಹಿಳೆಯ ಪಾದರಕ್ಷೆಗಳು ಕಂಡುಬಂದಿದ್ದು, ಕುಟುಂಬಸ್ಥರು ಕ್ಲಿನಿಕ್‌ಗೆ ನುಗ್ಗಿ ವೈದ್ಯನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಂತ್ರಸ್ತೆಯ ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 376(ಅತ್ಯಾಚಾರ) ಮತ್ತು ಇತರ ಸಂಬಂಧಿತ ಕಾಯ್ದೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com