ಮುಂದಿನ ವಾರ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ; 24 ಪಕ್ಷಗಳ ಮುಖಂಡರು ಭಾಗಿ ಸಾಧ್ಯತೆ

ಮುಂದಿನ ವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ 24 ವಿರೋಧ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮತ್ತಷ್ಟು ತಂತ್ರಗಳನ್ನು ರೂಪಿಸಲಿವೆ.
ಪಾಟ್ನಾದಲ್ಲಿ ನಡೆದ ವಿಪಕ್ಷ ನಾಯಕರ ಸಭೆಯ ಸಂಗ್ರಹ ಚಿತ್ರ
ಪಾಟ್ನಾದಲ್ಲಿ ನಡೆದ ವಿಪಕ್ಷ ನಾಯಕರ ಸಭೆಯ ಸಂಗ್ರಹ ಚಿತ್ರ

ನವದೆಹಲಿ: ಮುಂದಿನ ವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ 24 ವಿರೋಧ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮತ್ತಷ್ಟು ತಂತ್ರಗಳನ್ನು ರೂಪಿಸಲಿವೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜುಲೈ 17 ರಂದು ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ನಾಯಕರು ಉಪಸ್ಥಿತರಿರುವ ಔತಣಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಎಂಡಿಎಂಕೆ, ಕೆಡಿಎಂಕೆ, ವಿಸಿಕೆ, ಆರ್‌ಎಸ್‌ಪಿ, ಫಾರ್ವರ್ಡ್ ಬ್ಲಾಕ್, ಐಯುಎಂಎಲ್, ಕೇರಳ ಕಾಂಗ್ರೆಸ್ (ಜೋಸೆಫ್) ಮತ್ತು ಕೇರಳ ಕಾಂಗ್ರೆಸ್ (ಮಣಿ) ರಾಜಕೀಯ ಪಕ್ಷಗಳು ಜೂನ್ 17 ಮತ್ತು 18 ರಂದು ಎರಡನೇ ವಿಪಕ್ಷ ಸಭೆಯಲ್ಲಿ ಭಾಗವಹಿಸಲಿವೆ ಎಂದು ಮೂಲಗಳು ತಿಳಿಸಿವೆ.

ಜೂನ್ 23 ರಂದು ಬಿಹಾರದ ಪಾಟ್ನಾದಲ್ಲಿ ಮೊದಲ ವಿರೋಧ ಪಕ್ಷಗಳ ಸಭೆ ನಡೆಯಿತು. ಆಹ್ವಾನಿಸಲಾಗಿದ್ದ ಹದಿನಾರು ಪಕ್ಷಗಳ ಪೈಕಿ 15 ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಆರ್‌ಎಲ್‌ಡಿಯ ಜಯಂತ್ ಸಿನ್ಹಾ ಅವರು ಕುಟುಂಬದ ಕಾರ್ಯಕ್ರಮದ ಕಾರಣ ಹಾಜರಾಗಲು ಸಾಧ್ಯವಾಗಲಿಲ್ಲ.

"ಈಗಾಗಲೇ ಘೋಷಿಸಿರುವಂತೆ ಜುಲೈ 17 ಮತ್ತು 18 ರಂದು ದೇಶದ ಎಲ್ಲಾ ವಿರೋಧ ಪಕ್ಷಗಳ ನಾಯಕರ ಸಭೆ ನಡೆಸಲಾಗುವುದು ಮತ್ತು ಎಲ್ಲಾ ನಾಯಕರು ಆಗಮಿಸಲಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಈ ಸಭೆಯಲ್ಲಿ ಭಾಗವಹಿಸುವಂತೆ ಸೋನಿಯಾ ಗಾಂಧಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮನವಿ ಮಾಡಿದ್ದಾರೆ. ಅವರು ಈ ಸಭೆಯಲ್ಲಿ ಭಾಗವಹಿಸುತ್ತಾರೆ ಎಂಬ ಸಂದೇಶ ನಮಗೆ ಬಂದಿದೆ ಎಂದು ಡಿಕೆಶಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com