ಫ್ರಾನ್ಸ್‌ನಿಂದ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಅನುಮೋದನೆ

ಭಾರತದ ನೌಕಾ ಪಡೆಗೆ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಗುರುವಾರ ಅನುಮೋದನೆ ನೀಡಿದೆ. ಫ್ರೆಂಚ್ ನ ಮೂಲ ತಯಾರಕರೊಂದಿಗೆ ಜಂಟಿಯಾಗಿ ಮೂರು ಹೊಸ ಜಲಾಂತರ್ಗಾಮಿ ನೌಕೆಗಳ ನಿರ್ಮಾಣವನ್ನು ಸಹ ಪ್ರಸ್ತಾವನೆ ಒಳಗೊಂಡಿದೆ ಎಂದು ಮೂಲಗಳು ಹೇಳುತ್ತವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಭಾರತದ ನೌಕಾ ಪಡೆಗೆ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಗುರುವಾರ ಅನುಮೋದನೆ ನೀಡಿದೆ. ಫ್ರೆಂಚ್ ನ ಮೂಲ ತಯಾರಕರೊಂದಿಗೆ ಜಂಟಿಯಾಗಿ ಮೂರು ಹೊಸ ಜಲಾಂತರ್ಗಾಮಿ ನೌಕೆಗಳ ನಿರ್ಮಾಣವನ್ನು ಸಹ ಪ್ರಸ್ತಾವನೆ ಒಳಗೊಂಡಿದೆ ಎಂದು ಮೂಲಗಳು ಹೇಳುತ್ತವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ 26 ರಫೇಲ್-ಎಂ ಯುದ್ಧ ಯುದ್ಧವಿಮಾನಗಳ ಖರೀದಿ ಮತ್ತು ದೇಶದಲ್ಲಿ ಮೂರು ಹೊಸ ಜಲಾಂತರ್ಗಾಮಿ ನೌಕೆಗಳ ತಯಾರಿಕೆ ಸೇರಿದಂತೆ ಎರಡು ಪ್ರಸ್ತಾವನೆಗಳನ್ನು ಅನುಮೋದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕ್ರಮವು ದೇಶದ ನೌಕಪಡೆಯ ಸಾಮರ್ಥ್ಯವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಹೆಚ್ಚುವರಿ ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಯ ನಿರ್ಮಾಣದಿಂದ ನೀರೊಳಗಿನ ಭಾರತೀಯ ನೌಕಾಪಡೆ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ. 

ಪ್ರಧಾನಿ ನರೇಂದ್ರ ಮೋದಿ ಅವರ ಫ್ರಾನ್ಸ್ ಭೇಟಿಯ ಸಮಯದಲ್ಲಿ ಜುಲೈ 14-16 ರ ಅವಧಿಯಲ್ಲಿ ಫ್ರಾನ್ಸ್‌ನಿಂದ 26 ರಫೇಲ್ ಎಂ ಜೆಟ್‌ಗಳು ಮತ್ತು ಮೂರು ಹೆಚ್ಚುವರಿ ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಗಳನ್ನು ಖರೀದಿಸುವ ಒಪ್ಪಂದವನ್ನು ಘೋಷಿಸುವ ನಿರೀಕ್ಷೆಯಿದೆ. ಈ ಒಪ್ಪಂದಗಳು ಸುಮಾರು 90,000 ಕೋಟಿ ರೂ. ಮೊತ್ತದ್ದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com