ಹಳಿಗಳ ಮೇಲೆ ನೀರು: 300 ಮೇಲ್/ಎಕ್ಸ್‌ಪ್ರೆಸ್, 406 ಪ್ಯಾಸೆಂಜರ್ ರೈಲುಗಳು ರದ್ದು

ಉತ್ತರ ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಳಿಗಳ ಮೇಲೆ ನೀರು ನಿಂತಿರುವುದರಿಂದ ಜುಲೈ 7 ರಿಂದ ಜುಲೈ 15 ರ ನಡುವೆ 300ಕ್ಕೂ ಹೆಚ್ಚು ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳು ಹಾಗೂ 406 ಪ್ಯಾಸೆಂಜರ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಉತ್ತರ ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಳಿಗಳ ಮೇಲೆ ನೀರು ನಿಂತಿರುವುದರಿಂದ ಜುಲೈ 7 ರಿಂದ ಜುಲೈ 15 ರ ನಡುವೆ 300ಕ್ಕೂ ಹೆಚ್ಚು ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳು ಹಾಗೂ 406 ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಜಲಾವೃತದಿಂದ ಒಟ್ಟಾರೆಯಾಗಿ, ಸುಮಾರು 600 ಮೇಲ್/ಎಕ್ಸ್‌ಪ್ರೆಸ್ ರೈಲುಗಳು ಮತ್ತು 500 ಕ್ಕೂ ಹೆಚ್ಚು ಪ್ಯಾಸೆಂಜರ್ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಭಾರತದಲ್ಲಿ ಕಳೆದ ಶನಿವಾರದಿಂದ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಹಲವು ಪ್ರದೇಶಗಳಲ್ಲಿ "ಅತ್ಯಂತ ಭಾರೀ ಮಳೆ" ದಾಖಲಾಗಿದೆ.

ಇದರ ಪರಿಣಾಮವಾಗಿ ನದಿಗಳು, ತೊರೆಗಳು ಮತ್ತು ಚರಂಡಿಗಳು ತುಂಬಿ ಹರಿಯುತ್ತಿದ್ದು, ಮೂಲಸೌಕರ್ಯಗಳಿಗೆ ಭಾರೀ ಹಾನಿಯುಂಟಾಗಿದೆ ಮತ್ತು ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ಅಗತ್ಯ ಸೇವೆಗಳಿಗೆ ಅಡ್ಡಿಯಾಗಿದೆ.

ಈ ಪ್ರದೇಶಕ್ಕೆ ರೈಲು ಸೇವೆ ಪೂರೈಸುವ ಉತ್ತರ ರೈಲ್ವೆಯು ಸುಮಾರು 300 ಮೇಲ್/ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಿದೆ. 100 ರೈಲುಗಳನ್ನು ಅಲ್ಪಾವಧಿಗೆ ಕೊನೆಗೊಳಿಸಿದ್ದು, 191 ರೈಲುಗಳನ್ನು ಬೇರೆಡೆಗೆ ತಿರುಗಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com