ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಮೂವರು ಕಾರ್ಮಿಕರಿಗೆ ಗಂಭೀರ ಗಾಯ

ದಕ್ಷಿಣ ಕಾಶ್ಮೀರದಲ್ಲಿ ಉಗ್ರರು ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ಉಗ್ರರು ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ.

ಶೋಪಿಯಾನ್‌ ಜಿಲ್ಲೆಯ ಗಗ್ರಾನ್ ಪ್ರದೇಶದಲ್ಲಿ ಇಬ್ಬರು ಮುಸುಕುಧಾರಿ ಭಯೋತ್ಪಾದಕರು, ಮೂವರು ಕಾಶ್ಮೀರೇತರ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳನ್ನು ಬಿಹಾರ ಮೂಲದ ಅನ್ಮೋಲ್ ಕುಮಾರ್, ಹೀರಾಲಾಲ್ ಯಾದವ್ ಮತ್ತು ಪಿಂಟು ಕುಮಾರ್ ಠಾಕೂರ್ ಎಂದು ಗುರುತಿಸಲಾಗಿದೆ.

ರಾತ್ರಿ 8:45ರ ಸುಮಾರಿಗೆ ಇಬ್ಬರು ಮುಸುಕುಧಾರಿಗಳು ದಕ್ಷಿಣ ಕಾಶ್ಮೀರ ಜಿಲ್ಲೆಯ ಗಗ್ರಾನ್ ಗ್ರಾಮದಲ್ಲಿ ಕಾಶ್ಮೀರೇತರ ಕಾರ್ಮಿಕರ ಮನೆಗೆ ನುಗ್ಗಿ ಬಿಹಾರ ಮೂಲದ ಮೂವರು ಕಾರ್ಮಿಕರ ಮೇಲೆ ಗುಂಡು ಹಾರಿಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ದಾಳಿ ನಡೆದ ಪ್ರದೇಶವು ಭದ್ರತಾ ಪಡೆಗಳ ಶಿಬಿರದಿಂದ ಸುಮಾರು 150 ಮೀಟರ್ ದೂರದಲ್ಲಿದೆ. ಗಾಯಗೊಂಡ ಕಾರ್ಮಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ನಂತರ ಅವರನ್ನು ಎಸ್‌ಎಂಹೆಚ್‌ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com