19 ವರ್ಷದ ಯುವತಿ ಮೇಲೆ ಗ್ಯಾಂಗ್ ರೇಪ್: ಘಟನೆ ನಂತರ ಸಂತ್ರಸ್ತೆ ಆತ್ಮಹತ್ಯೆ ಯತ್ನ; ಮೂವರ ಬಂಧನ

ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ 19 ವರ್ಷದ ಯುವತಿಯನ್ನು ಅಪಹರಿಸಿ ನಾಲ್ವರು ಅತ್ಯಾಚಾರವೆಸಗಿದ್ದು, ಘಟನೆ ನಂತರ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ದಾತಿಯಾ: ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ 19 ವರ್ಷದ ಯುವತಿಯನ್ನು ಅಪಹರಿಸಿ ನಾಲ್ವರು ಅತ್ಯಾಚಾರವೆಸಗಿದ್ದು, ಘಟನೆ ನಂತರ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಉನಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಪೊಲೀಸರು ಈವರೆಗೆ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಸಂಬಂಧ ಯುವತಿಯ ಕಿರಿಯ ಸಹೋದರಿ ದೂರು ದಾಖಲಿಸಿದ್ದಾರೆ.

'ನಾನು ಮತ್ತು ನನ್ನ ಅಕ್ಕನನ್ನು ನಾಲ್ವರು ಅಪಹರಿಸಿದರು. ಆರೋಪಿಗಳು ನಮ್ಮನ್ನು ಅವರ ಮನೆಗೆ ಕರೆದೊಯ್ದು, ಅಲ್ಲಿ ಅಕ್ಕನ ಮೇಲೆ ಅತ್ಯಾಚಾರ ಎಸಗಿದ್ದಾರೆ' ಎಂದು ದೂರು ನೀಡಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪ್ರದೀಪ್ ಶರ್ಮಾ ತಿಳಿಸಿದ್ದಾರೆ.

ಘಟನೆ ನಂತರ ಸಂತ್ರಸ್ತೆ ಮತ್ತು ಆಕೆಯ ತಂಗಿ ಮನೆಗೆ ಮರಳಿದ್ದಾರೆ. ಅಲ್ಲಿ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂತರ ಯುವತಿಯನ್ನು ನೆರೆಯ ಉತ್ತರ ಪ್ರದೇಶದ ಝಾನ್ಸಿಯ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಶರ್ಮಾ ತಿಳಿಸಿದ್ದಾರೆ.

ಎಫ್‌ಐಆರ್ ಪ್ರಕಾರ, ಆರೋಪಿಯು ದೂರುದಾರರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉನಾವ್ ಪೊಲೀಸರು ಅಪರಾಧದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು ಉಳಿದ ಒಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅವರು ಹೇಳಿದರು.

ಘಟನೆ ಬಳಿಕ ಪೊಲೀಸ್ ಠಾಣೆಯ ಬಳಿ ಜಮಾಯಿಸಿದ ಹೆಚ್ಚಿನ ಸಂಖ್ಯೆಯ ಜನರು ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನರನ್ನು ಸಮಾಧಾನಪಡಿಸಿ ಎಫ್‌ಐಆರ್ ಪ್ರತಿಯನ್ನು ಅವರಿಗೆ ನೀಡಲಾಗಿದೆ ಎಂದು ಅವರು ಹೇಳಿದರು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ 376 D (ಗ್ಯಾಂಗ್‌ರೇಪ್), 354 (ಮಹಿಳೆ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ), 342 ಮತ್ತು ಪೊಕ್ಸೊ ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದರು.

ದಾತಿಯಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ತವರು ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com