ಶಿಕ್ಷಕರಿಂದ ಥಳಿತಕ್ಕೆ ಒಳಗಾದ 12 ವರ್ಷದ ಬಾಲಕ ಸಾವು!

ಶಿಕ್ಷಕರಿಂದ ಥಳಿತಕ್ಕೆ ಒಳಗಾದ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. 
ಸಾವು (ಸಾಂಕೇತಿಕ ಚಿತ್ರ)
ಸಾವು (ಸಾಂಕೇತಿಕ ಚಿತ್ರ)
Updated on: 

ಗ್ವಾಲಿಯರ್: ಶಿಕ್ಷಕರಿಂದ ಥಳಿತಕ್ಕೆ ಒಳಗಾದ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಥಳಿತಕ್ಕೆ ಒಳಗಾದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. 

ಹೋಮ್ ವರ್ಕ್ ನ್ನು ಪೂರ್ಣಗೊಳಿಸದ ಕಾರಣ ಶಿಕ್ಷಕ ವಿದ್ಯಾರ್ಥಿಯನ್ನು ಥಳಿಸಿದ್ದರು. ಶಿಕ್ಷಕನ ಥಳಿತದಿಂದಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. 

8 ನೇ ತರಗಿಯಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿಸಲಾದ ಸಾವಿಗೆ ಕಾರಣವನ್ನು ಆಧರಿಸಿ ಮುಂದಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com