ಎನ್‌ಡಿಎ ಸೇರಲು ಆರು ಲೋಕಸಭಾ ಸ್ಥಾನ, ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯಿಟ್ಟ ಚಿರಾಗ್ ಪಾಸ್ವಾನ್‌

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎಲ್‌ಜೆಪಿ(ರಾಮ್‌ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್‌ ಅವರಿಗೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಎರಡು ದಿನಗಳ ನಂತರ, ತಮ್ಮ ಪಕ್ಷಕ್ಕೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು...
ಚಿರಾಗ್ ಪಾಸ್ವಾನ್
ಚಿರಾಗ್ ಪಾಸ್ವಾನ್

ಪಾಟ್ನಾ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎಲ್‌ಜೆಪಿ(ರಾಮ್‌ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್‌ ಅವರಿಗೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಎರಡು ದಿನಗಳ ನಂತರ, ತಮ್ಮ ಪಕ್ಷಕ್ಕೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯನ್ನು ಬಿಜೆಪಿ ಒಪ್ಪಿಕೊಳ್ಳಬೇಕು ಎಂದು ಚಿರಾಗ್ ಒತ್ತಾಯಿಸಿದ್ದಾರೆ.

ಎಲ್‌ಜೆಪಿ(ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಅವರು ತಮ್ಮ ಪಕ್ಷಕ್ಕೆ ಹಾಜಿಪುರ ಸೇರಿದಂತೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿರುವುದಾಗಿ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಚಿರಾಗ್ ಅವರನ್ನು ಎನ್ ಡಿಎ ತೆಕ್ಕೆಗೆ ತರಲು ಬಿಜೆಪಿ ಯತ್ನಿಸುತ್ತಿದ್ದು, ಎಲ್‌ಜೆಪಿ (ರಾಮ್ ವಿಲಾಸ್) ಎನ್ ಡಿಎನ ಪ್ರಮುಖ ಮಿತ್ರ ಪಕ್ಷ ಎಂದು ಜೆಪಿ ನಡ್ಡಾ ಅವರು ಬಣ್ಣಿಸಿದ್ದಾರೆ. ಅಲ್ಲದೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಎಲ್‌ಜೆಪಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

ಚಿರಾಗ್ ಈಗಾಗಲೇ ಬಿಜೆಪಿ ನಾಯಕರ ಮುಂದೆ ತಮ್ಮ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.

ಚಿರಾಗ್ ಅವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುವುದು ಎಂಬ ಊಹಾಪೋಹಗಳಿವೆ. ಆದರೆ ಈ ಬಗ್ಗೆ ಚಿರಾಗ್ ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಮಯ ತೆಗೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ರೈ ಅವರು ಶುಕ್ರವಾರ ಸಂಜೆ ಚಿರಾಗ್ ಅವರನ್ನು ಎರಡನೇ ಬಾರಿ ಭೇಟಿಯಾಗಿ ಕೇಂದ್ರದ ಎನ್‌ಡಿಎ ಸರ್ಕಾರಕ್ಕೆ ಸೇರುವಂತೆ ಆಹ್ವಾನಿಸಿದ್ದರು.

ಜುಲೈ 18 ರಂದು ನವದೆಹಲಿಯಲ್ಲಿ ಎನ್‌ಡಿಎ ಸಭೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com