ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡಿನ ಮತ್ತೋರ್ವ ಸಚಿವ, ಪುತ್ರನ ಮನೆ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮತ್ತು ಅವರ ಪುತ್ರನಾಗಿರುವ ಸಂಸದ ಗೌತಮ್ ಸಿಗಮಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ತಮಿಳುನಾಡಿನ ಶಿಕ್ಷಣ ಸಚಿವ ಕೆ ಪೊನ್ಮುಡಿ
ತಮಿಳುನಾಡಿನ ಶಿಕ್ಷಣ ಸಚಿವ ಕೆ ಪೊನ್ಮುಡಿ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮತ್ತು ಅವರ ಪುತ್ರನಾಗಿರುವ ಸಂಸದ ಗೌತಮ್ ಸಿಗಮಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಜ್ಯದ ರಾಜಧಾನಿ ಚೆನ್ನೈನಲ್ಲಿ ಮತ್ತು ವಿಲ್ಲುಪುರಂನಲ್ಲಿರುವ ತಂದೆ-ಮಗನ ಮನೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.  ಪೊನ್ಮುಡಿ ರಾಜ್ಯ ಗಣಿಗಾರಿಕೆ ಸಚಿವರಾಗಿದ್ದಾಗ (2007 ಮತ್ತು 2011 ರ ನಡುವೆ) ನಡೆದ ಅಕ್ರಮ ಹಾಗೂ ಕ್ವಾರಿ ಪರವಾನಗಿ ಷರತ್ತುಗಳನ್ನು ಉಲ್ಲಂಘಿಸಿದ ಆರೋಪಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಇದಾಗಿದೆ. 

 ಮತ್ತು ಇದರಿಂದ ರಾಜ್ಯ ಬೊಕ್ಕಸಕ್ಕೆ ಸುಮಾರು 28 ಕೋಟಿ ನಷ್ಟಕ್ಕೆ ಕಾರಣವಾಯಿತು. ಇಡಿ ಇತ್ತೀಚೆಗೆ ಹಿರಿಯ ಡಿಎಂಕೆ ನಾಯಕ ಮತ್ತು ಟಿಎನ್ ಸಾರಿಗೆ ಸಚಿವ ಸೆಂಥಿಲ್ ಬಾಲಾಜಿ ವಿರುದ್ಧ ಇದೇ ರೀತಿಯ ಕ್ರಮವನ್ನು ಪ್ರಾರಂಭಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com