ನಾವು ಒಗ್ಗಟ್ಟಿನಿಂದ ಇದ್ದೇವೆ: ಬೆಂಗಳೂರಿನ ಸಭೆಯಲ್ಲಿ ಪ್ರತಿಪಕ್ಷಗಳ ಘೋಷ ವಾಕ್ಯ; ಮೊದಲ ದಿನ ಪವಾರ್ ಗೈರು!

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದ ಪ್ರತಿಪಕ್ಷಗಳ ಮೈತ್ರಿಕೂಟದ ಸಭೆಯಲ್ಲಿ 26 ಪಕ್ಷದ ಪ್ರತಿನಿಧಿಗಳು ಭಾಗಿಯಾಗಿದ್ದು, 2024 ರ ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಚರ್ಚಿಸಿದ್ದಾರೆ.
ವಿಪಕ್ಷಗಳ ಸಭೆ
ವಿಪಕ್ಷಗಳ ಸಭೆ

ಬೆಂಗಳೂರು: ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದ ಪ್ರತಿಪಕ್ಷಗಳ ಮೈತ್ರಿಕೂಟದ ಸಭೆಯಲ್ಲಿ 26 ಪಕ್ಷದ ಪ್ರತಿನಿಧಿಗಳು ಭಾಗಿಯಾಗಿದ್ದು, 2024 ರ ಲೋಕಸಭಾ ಚುನಾವಣೆ ತಯಾರಿ ಬಗ್ಗೆ ಚರ್ಚಿಸಿದ್ದಾರೆ.

ಪ್ರತಿಪಕ್ಷಗಳ ಮೈತ್ರಿಕೂಟದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಮಹತ್ವದ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇಂದು ಪ್ರಾಸ್ತಾವಿಕವಾಗಿ ಅಜೆಂಡಾಗಳ ಕುರಿತು ಮಾತನಾಡಲಾಗಿದೆ. ನಾಳಿನ ಸಭೆಯಲ್ಲಿ, ಚುನಾವಣೆ ದೃಷ್ಟಿಯಿಂದ 6 ಅಂಶಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಲಾಗುತ್ತದೆ ಎಂದು ಎಐಐಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಅಚ್ಚರಿಯೆಂಬಂತೆ ಮೊದಲ ದಿನ ನಡೆದ ಸಭೆಗೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗೈರು ಹಾಜರಾಗಿದ್ದು, ನಾಳೆ ಪುತ್ರಿ ಸುಪ್ರಿಯಾ ಸುಳೆ ಜೊತೆ ಬೆಂಗಳೂರಿನ ಸಭೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಮಮತಾ ಬ್ಯಾನರ್ಜಿ ಈ ಸಭೆಯ ಬಗ್ಗೆ ಉತ್ತಮವಾದ ಸಭೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾವು ಒಗ್ಗಟ್ಟಿನಿಂದ ಇದ್ದೇವೆ ಎಂಬುದು ಪ್ರತಿಪಕ್ಷಗಳ 2 ನೇ ಸಭೆಯ ಘೋಷವಾಕ್ಯವಾಗಿದ್ದು, ತಮ್ಮ ಸಭೆ,  ಚುನಾವಣೆಯ ದಿಕ್ಕನ್ನು ನಿರ್ಧರಿಸಲಿದ್ದು  ಭಾರತೀಯ ರಾಜಕೀಯ ಪರಿಸ್ಥಿತಿಯ ಗೇಮ್ ಚೇಂಜರ್ ಆಗಿರಲಿದೆ ಎಂದು ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ವಿಪಕ್ಷಗಳನ್ನು ಏಕಾಂಗಿಯಾಗಿ ಸೋಲಿಸುತ್ತೇವೆ ಎನ್ನುತ್ತಿದ್ದ ಬಿಜೆಪಿ ನಾಯಕರು, ಈಗ ಎನ್ ಡಿಎ ಗೆ ಜೀವ ತುಂಬಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ನಾಯಕರು ವ್ಯಂಗ್ಯವಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com