ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಕಡಿತಗೊಳಿಸಿದ ಕೇಂದ್ರ ಸರ್ಕಾರ!

ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೇರಲಾಗಿದ್ದ ಕೋವಿಡ್ ಮಾರ್ಗಸೂಚಿ ಕ್ರಮಗಳನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ.
ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
Updated on

ನವದೆಹಲಿ: ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೇರಲಾಗಿದ್ದ ಕೋವಿಡ್ ಮಾರ್ಗಸೂಚಿ ಕ್ರಮಗಳನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ.
 
ಕೇಂದ್ರ ಆರೋಗ್ಯ ಸಚಿವಾಲಯವು ಅಂತರಾಷ್ಟ್ರೀಯ ಪ್ರಯಾಣಿಕರಿಗೆ COVID-19 ಮಾರ್ಗಸೂಚಿಗಳನ್ನು ಮತ್ತಷ್ಟು ಸರಾಗಗೊಳಿಸಿದ್ದು, ಅಂತಾರಾಷ್ಟ್ರೀಯ ಪ್ರಯಾಣಿಕರ RT-PCR ಆಧಾರಿತ ಪರೀಕ್ಷೆಯ ಹಿಂದಿನ ಅಗತ್ಯವನ್ನು ಕೈಬಿಟ್ಟಿದೆ. ಈ ಹಿಂದೆ ಅಂತಾರಾಷ್ಟ್ರೀಯ ಪ್ರಯಾಣಿಕರ ಪ್ರಯಾಣಕ್ಕೆ ಶೇ.2ರಷ್ಟು ಆರ್ಟಿ-ಪಿಸಿಆರ್ ಆಧಾರಿತ ಪರೀಕ್ಷೆಯ ಅವಶ್ಯಕತೆ ಇತ್ತು. ಈ ನಿಯಮವನ್ನು ಕೇಂದ್ರ ಸರ್ಕಾರ ಕೈ ಬಿಟ್ಟಿದೆ.

ಇದನ್ನೂ ಓದಿ: ಕೋವಿಡ್ ಹಗರಣ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಪಿಎಸಿ ಶಿಫಾರಸು
  
ಪ್ರಚಲಿತದಲ್ಲಿರುವ ಕೊರೊನಾವೈರಸ್ ಪರಿಸ್ಥಿತಿ ಮತ್ತು ಜಗತ್ತಿನಾದ್ಯಂತ ವ್ಯಾಕ್ಸಿನೇಷನ್ ಕವರೇಜ್‌ನಲ್ಲಿ (ಲಸಿಕೀಕರಣ) ಮಾಡಿದ ಮಹತ್ವದ ಸಾಧನೆಗಳನ್ನು ಗಮನಿಸಿದ ನಂತರ ಮಾರ್ಗಸೂಚಿಗಳನ್ನು ಸರಾಗಗೊಳಿಸಲಾಗಿದೆ. ಈ ಹೊಸ ಮಾರ್ಗಸೂಚಿಗಳು ಜುಲೈ 20 ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ.

ಆದಾಗ್ಯೂ, ಕೋವಿಡ್ ಸಂದರ್ಭದಲ್ಲಿ ವಿಮಾನಯಾನ ಸಂಸ್ಥೆಗಳು ಮತ್ತು ಅಂತರಾಷ್ಟ್ರೀಯ ಪ್ರಯಾಣಿಕರು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಹಿಂದಿನ ಸಲಹೆಯು ಅನ್ವಯಿಸುವುದನ್ನು ಮುಂದುವರಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com