ನಾಳೆ ವಿಪಕ್ಷಗಳ ಮೈತ್ರಿಕೂಟದ ಮೊದಲ ಸಭೆ; ಸಂಸತ್ತಿನ ಮುಂಗಾರು ಅಧಿವೇಶನದ ಕಾರ್ಯತಂತ್ರ ಕುರಿತು ಚರ್ಚೆ

ಸಂಸತ್ತಿನ ಮುಂಗಾರು ಅಧಿವೇಶನಕ್ಕಾಗಿ ಜಂಟಿ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳ ಮೈತ್ರಿಕೂಟವಾದ INDIAದ ಮೊದಲ ಸಭೆ ಗುರುವಾರ ನಡೆಯಲಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ವಿಪಕ್ಷಗಳ ಸಭೆ ನಡೆದ ಸ್ಥಳದ ಹೊರಗೆ ಅಳವಡಿಸಲಾಗಿದ್ದ ವಿರೋಧ ಪಕ್ಷಗಳ ನಾಯಕರ ಪೋಸ್ಟರ್
ಬೆಂಗಳೂರಿನ ವಿಪಕ್ಷಗಳ ಸಭೆ ನಡೆದ ಸ್ಥಳದ ಹೊರಗೆ ಅಳವಡಿಸಲಾಗಿದ್ದ ವಿರೋಧ ಪಕ್ಷಗಳ ನಾಯಕರ ಪೋಸ್ಟರ್

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕಾಗಿ ಜಂಟಿ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳ ಮೈತ್ರಿಕೂಟವಾದ INDIAದ ಮೊದಲ ಸಭೆ ಗುರುವಾರ ನಡೆಯಲಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಮುಂಗಾರು ಅಧಿವೇಶನ ಆರಂಭವಾದ ಮೊದಲ ದಿನದಿಂದ ಸಂಸತ್ತಿನಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ವಿರೋಧ ಪಕ್ಷದ ನಾಯಕರೊಬ್ಬರು ಹೇಳಿದರು.

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಆರಂಭವಾಗಿ ಆಗಸ್ಟ್ 11 ರಂದು ಮುಕ್ತಾಯಗೊಳ್ಳಲಿದೆ.

ಬೆಂಗಳೂರಿನಲ್ಲಿ ಮಂಗಳವಾರ ಸಭೆ ಸೇರಿದ್ದ 26 ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ 'ಭಾರತೀಯ ರಾಷ್ಟ್ರೀಯ ಅಭಿವೃದ್ಧಿಶೀಲ ಎಲ್ಲರನ್ನೂ ಒಳಗೊಳ್ಳುವ ಮೈತ್ರಿಕೂಟ (INDIA)' ಎಂದು ಹೆಸರಿಟ್ಟಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸವಾಲು ಹಾಕಿವೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, 'INDIA ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ' ಈ ಹೋರಾಟ ನಡೆಯಲಿದೆ ಎಂದು ಪ್ರತಿಪಾದಿಸಿದರು.

ಮಂಗಳವಾರ ಮುಕ್ತಾಯಗೊಂಡ ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ವಿಪಕ್ಷಗಳ ಸಭೆಯಲ್ಲಿ, ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಸ್ತಾಪಿಸಲು ಬಯಸುವ ವಿಷಯಗಳ ಬಗ್ಗೆ ಸಮನ್ವಯ ಸಾಧಿಸಲು ಎಲ್ಲಾ ಪಕ್ಷದ ನಾಯಕರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

26 ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಸುಮಾರು 150 ಸ್ಥಾನಗಳ ಬಲವನ್ನು ಹೊಂದಿವೆ. ಎನ್‌ಡಿಎ 330ಕ್ಕೂ ಹೆಚ್ಚು ಸ್ಥಾನಗಳನ್ನು ಹೊಂದಿದ್ದು, ದೆಹಲಿ ಮತ್ತು 10 ರಾಜ್ಯಗಳಲ್ಲಿ ವೈಯಕ್ತಿಕವಾಗಿ ಅಥವಾ ಮೈತ್ರಿಯೊಂದಿಗೆ ಅಧಿಕಾರದಲ್ಲಿದೆ.

ವಿರೋಧ ಪಕ್ಷಗಳ ಒಕ್ಕೂಟದಲ್ಲಿನ 26 ಪಕ್ಷಗಳು

ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಎಎಪಿ, ಜೆಡಿ(ಯು), ಆರ್‌ಜೆಡಿ, ಜೆಎಂಎಂ, ಎನ್‌ಸಿಪಿ (ಶರದ್ ಪವಾರ್), ಶಿವಸೇನೆ (ಯುಬಿಟಿ), ಎಸ್‌ಪಿ, ಎನ್‌ಸಿ, ಪಿಡಿಪಿ, ಸಿಪಿಐ(ಎಂ), ಸಿಪಿಐ, ಆರ್‌ಎಲ್‌ಡಿ, ಎಂಡಿಎಂಕೆ, ಕೊಂಗುನಾಡು ಮಕ್ಕಳ್ ದೇಶಿಯಾ ಕಚ್ಚಿ (ಕೆಎಂಡಿಕೆ), ವಿಸಿಕೆ, ಆರ್‌ಎಸ್‌ಪಿ, ಸಿಪಿಐ-ಎಂಎಲ್ (ಲಿಬರೇಶನ್), ಫಾರ್ವರ್ಡ್ ಬ್ಲಾಕ್, ಐಯುಎಂಎಲ್, ಕೇರಳ ಕಾಂಗ್ರೆಸ್ (ಜೋಸೆಫ್), ಕೇರಳ ಕಾಂಗ್ರೆಸ್ (ಮಣಿ), ಅಪ್ನಾ ದಳ (ಕಾಮೆರವಾಡಿ) ಮತ್ತು ಮನಿತಾನೇಯ ಮಕ್ಕಳ್ ಕಚ್ಚಿ (ಎಂಎಂಕೆ).

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com