ತೀಸ್ತಾ ಸೆಟಲ್ವಾಡ್‌ಗೆ ಸಾಮಾನ್ಯ ಜಾಮೀನು ನೀಡಿದ ಸುಪ್ರೀಂ ಕೋರ್ಟ್!

ಗೋದ್ರೋತ್ತರ ಗಲಭೆ ಅಥವಾ 2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ.
ತೀಸ್ತಾ ಸೆಟಲ್ವಾಡ್‌
ತೀಸ್ತಾ ಸೆಟಲ್ವಾಡ್‌

ನವದೆಹಲಿ: ಗೋದ್ರೋತ್ತರ ಗಲಭೆ ಅಥವಾ 2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ.

ಇಂದು ನಡೆದ ಮಹತ್ವದ ವಿಚಾರಣೆಯಲ್ಲಿ ತೀಸ್ತಾ ಸೆಟಲ್ವಾಡ್ ವಿರುದ್ಧದ ಪ್ರಕರಣದಲ್ಲಿ ಈಗಾಗಲೇ ಚಾರ್ಜ್ ಶೀಟ್ ದಾಖಲಾಗಿರುವುದರಿಂದ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್ ಅವರಿಗೆ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.

ಅಂತೆಯೇ ಜಾಮೀನು ನೀಡುವಾಗ, ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೆ ತೀಸ್ತಾ ಸೆಟಲ್ವಾಡ್‌ ರನ್ನು ಕೂಡಲೇ ಶರಣಾಗುವಂತೆ ಆದೇಶ ನೀಡಿ, ಜಾಮೀನು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ನ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್‌ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ. ಒಂದು ವೇಳೆ ಆಕೆ ಈ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದರೆ, ಗುಜರಾತ್ ಪೊಲೀಸರಿಗೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವ ಮೂಲಕ ಜಾಮೀನು ರದ್ದುಗೊಳಿಸಲು ಕೋರ್ಟ್ ಅನುಮತಿ ನೀಡಿದೆ.

ಕಳೆದ ವರ್ಷ ಸೆಪ್ಟೆಂಬರ್ 2 ರಂದು, ಸುಪ್ರೀಂ ಕೋರ್ಟ್ ಆಕೆಗೆ ಮಧ್ಯಂತರ ಜಾಮೀನು ನೀಡಿದ್ದು, ಆಕೆ ಮಹಿಳೆ ಮತ್ತು ಹೆಚ್ಚಿನ ಸಾಕ್ಷ್ಯಾಧಾರಗಳು 2002 ರ ಪ್ರಕರಣಕ್ಕೆ ಸಂಬಂಧಿಸಿವೆ. ಈ ಷರತ್ತುಗಳು ಇಂದಿಗೂ ಪ್ರಸ್ತುತವಾಗಿರುವ ಕಾರಣ ಅವರಿಗೆ ಜಾಮೀನು ನೀಡಲು ನಿರ್ಧರಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com