ವಿಪಕ್ಷಗಳು ಸದನದಲ್ಲಿ ಚರ್ಚೆಗಳು ನಡೆಯದಂತೆ ನೋಡಿಕೊಳ್ಳಲು ಹೊಸ ದಾರಿಗಳನ್ನು ಹುಡುಕುತ್ತಿವೆ: ಪ್ರಲ್ಲಾದ್ ಜೋಶಿ ಟೀಕೆ

ಪ್ರತಿಪಕ್ಷಗಳು ಚರ್ಚೆಯನ್ನು ಬಯಸುವುದಿಲ್ಲ. ಅವರು ಕೇವಲ ನೆಪ ಹುಡುಕುತ್ತಿದ್ದಾರೆ. ಆದರೆ ನಾವು ಯಾವುದೇ ವಿಷಯದ ಬಗ್ಗೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 
ಇಂದು ಅಧಿವೇಶನ ಆರಂಭಕ್ಕೆ ಮುನ್ನ ಸಂಸತ್ತಿನ ಹೊರಗೆ ಪ್ರಧಾನಿ ಮೋದಿ ಜೊತೆ ಸಚಿವರುಗಳು
ಇಂದು ಅಧಿವೇಶನ ಆರಂಭಕ್ಕೆ ಮುನ್ನ ಸಂಸತ್ತಿನ ಹೊರಗೆ ಪ್ರಧಾನಿ ಮೋದಿ ಜೊತೆ ಸಚಿವರುಗಳು
Updated on

ನವದೆಹಲಿ: ಪ್ರತಿಪಕ್ಷಗಳು ಚರ್ಚೆಯನ್ನು ಬಯಸುವುದಿಲ್ಲ. ಅವರು ಕೇವಲ ನೆಪ ಹುಡುಕುತ್ತಿದ್ದಾರೆ. ಆದರೆ ನಾವು ಯಾವುದೇ ವಿಷಯದ ಬಗ್ಗೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 

ಮುಂಗಾರು ಅಧಿವೇಶನದಲ್ಲಿ ಎಲ್ಲ ವಿಷಯಗಳನ್ನು ಚರ್ಚಿಸಲು ಸಿದ್ಧ ಎಂದು ಸರ್ಕಾರ ಹೇಳಿದೆ. ಸಂಸತ್ತಿನ ಸುಗಮ ಕಲಾಪಕ್ಕೆ ಬೆಂಬಲ ನೀಡುವಂತೆ ನಾವು ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದೇವೆ ಎಂದು ಜೋಶಿ ಹೇಳಿದ್ದಾರೆ.

ನಿನ್ನೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅವರು, ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಣಿಪುರದ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಾಗಿದೆ, ಈಶಾನ್ಯ ರಾಜ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ನೋಡಲ್ ಸಚಿವಾಲಯವಾಗಿದೆ ಎಂದು ಸ್ಪಷ್ಟಪಡಿಸಿದರು.

ಮಣಿಪುರದಲ್ಲಿ ಮೇ 3 ರಂದು ನಡೆದ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ'ಯಿಂದ ಉಂಟಾದ ಜನಾಂಗೀಯ ಹಿಂಸಾಚಾರದಲ್ಲಿ 150 ಕ್ಕೂ ಹೆಚ್ಚು ಜೀವಗಳು ಬಲಿಯಾದ ಪರಿಸ್ಥಿತಿಯ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿ ಹೇಳಿಕೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ನಿನ್ನೆ ಜೋಶಿ ಮಾತನಾಡಿ, ಮಣಿಪುರದ ಕುರಿತು ಚರ್ಚೆಗೆ ಎಲ್ಲಾ ಪಕ್ಷಗಳು ಒತ್ತಾಯಿಸುತ್ತಿವೆ. ಸರ್ಕಾರ ಚರ್ಚೆಗೆ ಒಪ್ಪಿಗೆ ನೀಡಿದ ನಂತರ ಪ್ರಧಾನಿ ಈ ಕುರಿತು ಹೇಳಿಕೆ ನೀಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿರುವುದು ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸಲು ನೋಡುವಂತಿದೆ ಎಂದು ಟೀಕಿಸಿದರು.

ಸದನದಲ್ಲಿ ಚರ್ಚೆಗೆ ಅವಕಾಶ ನೀಡದಿರಲು ಪ್ರತಿಪಕ್ಷಗಳು ಹೊಸ ಕಾರಣಗಳನ್ನು ಹುಡುಕುತ್ತಿವೆ. ಪ್ರತಿಪಕ್ಷಗಳ ಬೇಡಿಕೆಯ ಮೇರೆಗೆ ಮಣಿಪುರದ ಬಗ್ಗೆ ಚರ್ಚಿಸಲು ಸರ್ಕಾರ ಒಪ್ಪಿಕೊಂಡಿತು. ಈಗ ಅವರು ಈ ವಿಷಯದ ಬಗ್ಗೆ ಪ್ರಧಾನಿ ಹೇಳಿಕೆಯನ್ನು ಬಯಸುತ್ತಾರೆ. ಈ ಮಂದಿ ಹೊಸ ಹೊಸ ನೆಪಗಳನ್ನು ಮುಂದಿಟ್ಟುಕೊಂಡು ಸದನ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com