ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 13ಕ್ಕೆ ಏರಿಕೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಿಂದ ಕನಿಷ್ಠ 12 ಮೃತದೇಹಗಳನ್ನು ಅವಶೇಷಗಳಿಂದ ಹೊರ ತೆಗೆಯಲಾಗಿದೆ. ಹಲವು  ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಭೂ ಕುಸಿತ ಸಂಭವಿಸಿದ ಸ್ಥಳ
ಭೂ ಕುಸಿತ ಸಂಭವಿಸಿದ ಸ್ಥಳ

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಿಂದ ಕನಿಷ್ಠ 12 ಮೃತದೇಹಗಳನ್ನು ಅವಶೇಷಗಳಿಂದ ಹೊರ ತೆಗೆಯಲಾಗಿದೆ. ಹಲವು  ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ 12 ಮಂದಿ ಸಾವನ್ನಪ್ಪಿದ್ದು, ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಪೊಲೀಸರು ತಿಳಿಸಿದ್ದಾರೆ.

ಭೂ ಕುಸಿತದಿಂದ ಸುಮಾರು 48 ಕುಟುಂಬಗಳಿಗೆ ಹಾನಿಯಾಗಿದೆ ಎನ್ನಲಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಮಹಾರಾಷ್ಟ್ರ ಸರ್ಕಾರ ಭರಿಸಲಿದೆ ಎಂದೂ ಅವರು ಹೇಳಿದ್ದಾರೆ.

ಈ ಮಧ್ಯೆ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿದ್ದಾರೆ. ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಕೂಡಾ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com