ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ: ವೀಡಿಯೋ ತೆಗೆದುಹಾಕಲು ಟ್ವಿಟರ್ ಗೆ ಎನ್ ಸಿಡಬ್ಲ್ಯೂ ನಿರ್ದೇಶನ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಅವಮಾನಕರ ಕೃತ್ಯ ತೋರಿಸುವ ವೀಡಿಯೊವನ್ನು ತೆಗೆದು ಹಾಕುವಂತೆ ಟ್ವಿಟರ್ ಇಂಡಿಯಾಗೆ ನಿರ್ದೇಶನ ನೀಡಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ. 
ಟ್ವಿಟರ್ ಲೋಗೊ
ಟ್ವಿಟರ್ ಲೋಗೊ

ನವೆದಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಅವಮಾನಕರ ಕೃತ್ಯ ತೋರಿಸುವ ವೀಡಿಯೊವನ್ನು ತೆಗೆದು ಹಾಕುವಂತೆ ಟ್ವಿಟರ್ ಇಂಡಿಯಾಗೆ ನಿರ್ದೇಶನ ನೀಡಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ. 

ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರೀಯ ಮಹಿಳಾ ಆಯೋಗ, ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಅವಮಾನಕರ ಕೃತ್ಯವನ್ನು ತೋರಿಸುವ ವೀಡಿಯೊವನ್ನು ತೆಗೆದುಹಾಕಲು ಟ್ವೀಟರ್ ಇಂಡಿಯಾದ ಸಾರ್ವಜನಿಕ ನೀತಿಯ ಮುಖ್ಯಸ್ಥರಿಗೆ ಔಪಚಾರಿಕವಾಗಿ ನಿರ್ದೇಶನ ನೀಡಲಾಗಿದೆ. ಈ ವೀಡಿಯೊದಲ್ಲಿ ಸಂತ್ರಸ್ತರನ್ನು ಗುರುತಿಸಬಹುದಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದೆ. 

ಈ ಹೀನಕೃತ್ಯವೆಸಗಿದ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳ ವಿರುದ್ಧ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 150 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com