ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ: 4 ಆರೋಪಿಗಳಿಗೆ 11 ದಿನ ಪೊಲೀಸ್ ಕಸ್ಟಡಿ; ಆರೋಪಿ ಮನೆಗೆ ಬೆಂಕಿ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನ ಪೊಲೀಸ್ ಕಸ್ಟಡಿ ವಿಧಿಸಿದೆ.
ಆರೋಪಿ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಾಕಿರುವ ದೃಶ್ಯ.
ಆರೋಪಿ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಾಕಿರುವ ದೃಶ್ಯ.
Updated on

ಇಂಫಾಲ: ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನ ಪೊಲೀಸ್ ಕಸ್ಟಡಿ ವಿಧಿಸಿದೆ.

ರಾಜಧಾನಿ ಇಂಫಾಲದಿಂದ ಸುಮಾರು 35 ಕಿಮೀ ದೂರದಲ್ಲಿರುವ ಕಾಂಗ್‌ ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಜನರ ಗುಂಪೊಂದು ಮಹಿಳೆಯರನ್ನು ಥಳಿಸಿ ಬೆತ್ತಲೆಗೊಳಿಸಿ ಅವರನ್ನು ಮೆರವಣಿಗೆ ಮಾಡಿದ್ದು ಮಾತ್ರವಲ್ಲದೇ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ಭಯಾನಕ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿತ್ತು. ಇದೀಗ ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪ್ರಮುಖ ಆರೋಪಿ ಸೇರಿದಂತೆ ಒಟ್ಟು ನಾಲ್ಕು ಆರೋಪಿಗಳನ್ನು ಬಂಧಿಸಿದ್ದಾರೆ.

ಇಂದು ಈ ನಾಲ್ಕು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಿದೆ.

ಆರೋಪಿ ಮನೆಗೆ ಬೆಂಕಿ
ಇನ್ನು ಪ್ರಕರಣದ ಪ್ರಮುಖ ಆರೋಪಿ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಾಕಿರುವ ಘಟನೆ ವರದಿಯಾಗಿದೆ. ಆರೋಪಿಯ ಮನೆಗೆ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ ಎನ್ನಲಾಗಿದೆ. ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ ಕಾಂಗ್‌ಪೋಕ್ಪಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಆದರೆ, ಬುಧವಾರವಷ್ಟೇ ಈ ಭಯಾನಕ ದೃಶ್ಯಾವಳಿಗಳು ಹೊರಬಂದು ಇಂಟರ್ನೆಟ್ ನಿಷೇಧವನ್ನು ತೆಗೆದುಹಾಕಿದ ನಂತರ ವೈರಲ್ ಆಗಿದೆ. ಇದು ವೈರಲ್ ಆದ ಕೂಡಲೇ ಈ ವಿಡಿಯೋ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.

ವಿಡಿಯೋ ವೈರಲ್ ಆದ ಬಳಿಕ ಎಚ್ಚೆತ್ತ ಪೊಲೀಸರು
ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ವಯಂಪ್ರೇರಿತವಾಗಿ ದೂರು ದಾಖಲು ಮಾಡಿಕೊಂಡ ಮಣಿಪುರ ಪೊಲೀಸರು ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ವಿರುದ್ಧ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಗುರುವಾರ ಮಾತನಾಡಿದ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ ತಪ್ಪಿತಸ್ಥರಿಗೆ ಕಠಿಣ ಕ್ರಮವನ್ನು ಅನುಸರಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com