ನಾನು ಭಾರತೀಯ ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ: ಮಣಿಪುರದ ಬಗ್ಗೆ ಗಂಭೀರ್ ಆಕ್ರೋಶ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ "ಅತ್ಯಂತ ನಾಚಿಕೆಗೇಡಿನ ಸಂಗತಿ" ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ನಾನು ಭಾರತೀಯ...
ಗೌತಮ್ ಗಂಭೀರ್
ಗೌತಮ್ ಗಂಭೀರ್

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ "ಅತ್ಯಂತ ನಾಚಿಕೆಗೇಡಿನ ಸಂಗತಿ" ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ನಾನು ಭಾರತೀಯ ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಮಣಿಪುರದಲ್ಲಿ ನಡೆದ ಘಟನೆಗಳು ಸಾಮಾನ್ಯ ಘಟನೆಯಲ್ಲ. ಇಂತಹ ಘಟನೆಗಳು ನಡೆದಂತೆ ನೋಡಿಕೊಳ್ಳುವುದು ರಾಜ್ಯದ ಮುಖ್ಯಮಂತ್ರಿಯ ಕರ್ತವ್ಯ ಎಂದು ಪೂರ್ವ ದೆಹಲಿಯ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ಇದು ಅತ್ಯಂತ ನಾಚಿಕೆಗೇಡಿನ ಸಂಗತಿ. ನಾನು ಭಾರತೀಯ ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ. ಏಕೆಂದರೆ ಈ ಸಮಸ್ಯೆ ಕೇವಲ ಮಣಿಪುರಕ್ಕೆ ಸೀಮಿತವಾಗಿಲ್ಲ. ಇದು ಇಡೀ ದೇಶ ತಲೆ ತಗ್ಗಿಸುವಂತೆ ಮಾಡಿದೆ. ಆದ್ದರಿಂದ ಇದನ್ನು ರಾಜಕೀಯಗೊಳಿಸಬಾರದು" ಎಂದು ಗಂಭೀರ್ ಹೇಳಿದ್ದಾರೆ.

ಮೇ 4 ರಂದು ಒಂದು ಸಮುದಾಯದ ಇಬ್ಬರು ಮಹಿಳೆಯರನ್ನು ಇನ್ನೊಂದು ಸಮುದಾಯದ ಪುರುಷರ ಗುಂಪು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವೀಡಿಯೊ ವೈರಲ್ ಆದ ನಂತರ ಮಣಿಪುರದ ಬೆಟ್ಟಗಳಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com