ರೋಜ್ ಗಾರ್ ಮೇಳ: ಹೊಸದಾಗಿ ನೇಮಕಗೊಂಡ 70,000 ಯುವಕರಿಗೆ ನಾಳೆ ಪ್ರಧಾನಿ ಮೋದಿಯಿಂದ ನೇಮಕಾತಿ ಪತ್ರ ವಿತರಣೆ

ಕೇಂದ್ರ ಸರ್ಕಾರದ ರೋಜ್ ಗಾರ್ ಮೇಳದಲ್ಲಿ ಹೊಸದಾಗಿ ನೇಮಕಗೊಂಡ 70,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೀಡಿಯೊ ಕಾನ್ಫರೆನ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಮತ್ತು ಅವರನ್ನು...
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಕೇಂದ್ರ ಸರ್ಕಾರದ ರೋಜ್ ಗಾರ್ ಮೇಳದಲ್ಲಿ ಹೊಸದಾಗಿ ನೇಮಕಗೊಂಡ 70,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೀಡಿಯೊ ಕಾನ್ಫರೆನ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಮತ್ತು ಅವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ರೋಜ್ ಗಾರ್ ಮೇಳದ ಮೂಲಕ ಈ ನೇಮಕಾತಿಗಳು ನಡೆಯುತ್ತಿವೆ ಎಂದು ಪ್ರಧಾನ ಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಧಾನಿ ಮೋದಿ ಅವರು ಜುಲೈ 22 ರಂದು ಬೆಳಿಗ್ಗೆ 10:30 ಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 70,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ಪಿಎಂಒ ಹೇಳಿದೆ. ಅಲ್ಲದೆ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ದೇಶಾದ್ಯಂತ ಆಯ್ಕೆಯಾದ ಯುವಕರು, ಕಂದಾಯ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳು, ಜಲಸಂಪನ್ಮೂಲ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಸರ್ಕಾರಿ ಸೇವೆಗೆ ಸೇರಿಕೊಳ್ಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com