ಬಿಹಾರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಶಿಕ್ಷಕನ ಬಂಧನ
ಬೇಗುಸರಾಯ್: ಕಾಂಪ್ರೊಮೈಸಿಂಗ್ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಹಾಗೂ ಶಿಕ್ಷಕನನ್ನು ಮೂವರು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಮೂವರು ವ್ಯಕ್ತಿಗಳು ಅಪ್ರಾಪ್ತ ಬಾಲಕಿ ಮತ್ತು ಶಿಕ್ಷಕನ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂತ್ರಸ್ತೆ ನೀಡಿದ ಹೇಳಿಕೆ ಆಧರಿಸಿ ಸಂಗೀತ ಶಿಕ್ಷಕನನ್ನು ಬಂಧಿಸಿದ್ದೇವೆ. ಆರೋಪಿ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 67 ಬಿ ಮತ್ತು ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಸೂಪರಿಟೆಂಡ್ ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿ ಮತ್ತು ಆರೋಪಿಗಳ ಮೇಲೆ ಹಲ್ಲೆ ನಡೆಸಿದ ಮೂವರು ವ್ಯಕ್ತಿಗಳನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ. ಘಟನೆ ಗುರುವಾರ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ "ಪೊಲೀಸರು ವೀಡಿಯೊವನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಇಬ್ಬರು ವ್ಯಕ್ತಿಗಳ ಬಟ್ಟೆಗಳನ್ನು ಮತ್ತು ಸ್ಥಳದಿಂದ ವಶಪಡಿಸಿಕೊಂಡ ಇತರ ಪುರಾವೆಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಕುಮಾರ್ ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ