ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 24ಕ್ಕೆ ಏರಿಕೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತ ಸ್ಥಳದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎರಡು ಶವಗಳನ್ನು ಶೋಧ ಮತ್ತು ರಕ್ಷಣಾ ತಂಡಗಳು  ಶನಿವಾರ ಹೊರತೆಗೆದಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎನ್ ಡಿಆರ್ ಎಫ್ ಸಿಬ್ಬಂದಿ
ಎನ್ ಡಿಆರ್ ಎಫ್ ಸಿಬ್ಬಂದಿ
Updated on

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತ ಸ್ಥಳದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎರಡು ಶವಗಳನ್ನು ಶೋಧ ಮತ್ತು ರಕ್ಷಣಾ ತಂಡಗಳು  ಶನಿವಾರ ಹೊರತೆಗೆದಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರಿಬ್ಬರೂ  ಮಹಿಳೆಯರು ಎಂದು ಅವರು ಹೇಳಿದರು.

ಇಂದು ಬೆಳಗ್ಗೆ ಇರ್ಶಲವಾಡಿಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಿಂದ ಇಬ್ಬರು ಮಹಿಳೆಯರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ 84 ಜನರನ್ನು ಹುಡುಕಲಾಗುತ್ತಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಮೃತ ಮಹಿಳೆಯರಲ್ಲಿ ಒಬ್ಬರನ್ನು 32 ವರ್ಷದ ಮಹಿ ಮಧು ತಿರ್ಕತ್ ಎಂದು ಗುರುತಿಸಲಾಗಿದೆ. ಎನ್ ಡಿಆರ್ ಎಫ್ ಮತ್ತಿತರ  ಸರ್ಕಾರಿ ಏಜೆನ್ಸಿಗಳ ತಂಡಗಳು ಬೆಳಿಗ್ಗೆ ಗುಡ್ಡಗಾಡು ಪ್ರದೇಶದಲ್ಲಿ ನೆಲೆಗೊಂಡಿರುವ ಭೂಕುಸಿತ ಸ್ಥಳದಲ್ಲಿ ತಮ್ಮ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ. ಇದು ಮೂರನೇ ದಿನದ ಶೋಧ ಕಾರ್ಯಾಚರಣೆಯಾಗಿದೆ. 

ಬುಧವಾರ ರಾತ್ರಿ ಮುಂಬೈನಿಂದ ಸುಮಾರು 80 ಕಿಮೀ ದೂರದಲ್ಲಿರುವ ಕರಾವಳಿ ಜಿಲ್ಲೆಯ ಬೆಟ್ಟದ ಇಳಿಜಾರಿನಲ್ಲಿರುವ ಬುಡಕಟ್ಟು ಗ್ರಾಮ ಇರ್ಶಲ್ವಾಡಿಯಲ್ಲಿ ಸಂಭವಿಸಿದ ಭೂ ಕುಸಿತದಿಂದ ಗ್ರಾಮದಲ್ಲಿನ 48 ಮನೆಗಳಲ್ಲಿ ಕನಿಷ್ಠ 17 ಮನೆಗಳು ಭೂಕುಸಿತದ ಅವಶೇಷಗಳ ಅಡಿಯಲ್ಲಿ ಸಂಪೂರ್ಣವಾಗಿ ಅಥವಾ ಭಾಗಶಃ ಹೂತುಹೋಗಿವೆ.

ಜನಪ್ರಿಯ ಟ್ರೆಕ್ಕಿಂಗ್ ತಾಣವಾಗಿರುವ ಇರ್ಶಲ್‌ಗಡ ಕೋಟೆಯಿಂದ ಕಡೆಗಣಿಸಲ್ಪಟ್ಟಿರುವ ಗ್ರಾಮವು ಪಕ್ಕಾ ರಸ್ತೆಯನ್ನು ಹೊಂದಿಲ್ಲದ ಕಾರಣ, ಜೆಸಿಬಿ ಮತ್ತಿತರ ಯಂತ್ರಗಳನ್ನು ಸುಲಭವಾಗಿ ಸ್ಥಳಾಂತರಿಸಲಾಗುತ್ತಿಲ್ಲ ಹೀಗಾಗಿ ರಕ್ಷಣಾ ಕಾರ್ಯಾಚರಣೆಯನ್ನು ಮನುಷ್ಯರಿಂದಲೇ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com