ರಾಂಚಿ: ಮದುವೆ ಪ್ರಸ್ತಾಪ ನಿರಾಕರಿಸಿದ ಯುವತಿಗೆ ಚೂರಿ ಇರಿದು ಹತ್ಯೆ

ಮದುವೆ ಪ್ರಸ್ತಾಪ ನಿರಾಕರಿಸಿ ಯುವತಿಯೊಬ್ಬಳಿಗೆ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ರಾಂಚಿಯಲ್ಲಿ ಶುಕ್ರವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಂಚಿ: ಮದುವೆ ಪ್ರಸ್ತಾಪ ನಿರಾಕರಿಸಿ ಯುವತಿಯೊಬ್ಬಳಿಗೆ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ರಾಂಚಿಯಲ್ಲಿ ಶುಕ್ರವಾರ ನಡೆದಿದೆ.

ದ್ವಿತೀಯ ಪಿಯುಸಿ ಓದುತ್ತಿದ್ದ ಖುಷ್ಬೂ ಖಾಖಾ ಮೃತ ಯುವತಿಯಾಗಿದ್ದಾಳೆ. ಆರೋಪಿಯನ್ನು ಅರ್ಜನ್ ಓರಾನ್ ಎಂದು ಗುರ್ತಿಸಲಾಗಿದೆ.

ಗುರುವಾರ ವಾರದ ಸಂತೆ ಇದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಇದನ್ನೇ ತನ್ನ ಲಾಭವಾಗಿ ಬಳಸಿಕೊಂಡ ಆರೋಪಿ ಸಂಜೆ 4 ಗಂಟೆ ಸುಮಾರಿಗೆ ಮನೆಗೆ ಬಂದಿದ್ದಾನೆ. ಈ ವೇಳೆ ಮಗಳಿಗೆ ಹಲವು ಬಾರಿ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಮಗಳ ಕೂಗು ಕೇಳಿದ ಸ್ಥಳೀಯರು ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ವೈದ್ಯರು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ರಿಮ್ಸ್)ಗೆ ದಾಖಲಿಸುವಂತೆ ಸಲಹೆ ನೀಡಿದ್ದಾರೆಂದು ಯುವತಿಯ ತಂದೆ ಸುರೇಖ್ ಖಾಖಾ ಅವರು ಹೇಳಿದ್ದಾರೆ.

ಆರೋಪಿ ವೃತ್ತಿಯಲ್ಲಿ ಚಾಲಕನಾಗಿದ್ದು, ಪದೇ ಪದೇ ತನ್ನನ್ನು ವಿವಾಹವಾಗುವಂತೆ ಯುವತಿಗೆ ಪೀಡಿಸಿದ್ದಾನೆ. ಆದರೆ, ಯುವತಿ ಪ್ರತೀ ಬಾರಿ ನಿರಾಕರಿಸುತ್ತಲೇ ಬಂದ ಹಿನ್ನೆಲೆಯಲ್ಲಿ ಯುವತಿಗೆ ಚೂರಿ ಇರಿದಿದ್ದಾನೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವತಿ ಶುಕ್ರವಾರ ಕೊನೆಯುಸಿರೆಳೆದಿದ್ದಾಳೆಂದು ಎಸ್'ಪಿ ನೌಶಾದ್ ಅಲಾಮ್ ಅವರು ಹೇಳಿದ್ದಾರೆ.

ಘಟನೆ ಸಂಬಂಧ ಖುಷ್ಟೂ ಅವರ ತಂದೆ ಸುರೇಶ್ ಅವರು ನೀಡಿದ ದೂರಿನ ಆಧಾರದ ಮೇಲೆ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com