ಮಣಿಪುರ ಕ್ರೌರ್ಯ ನಡೆದ ಅದೇ ದಿನ ಮತ್ತಿಬ್ಬರು ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ, ಭೀಕರ ಹತ್ಯೆ?

ಇಡೀ ದೇಶವನ್ನು ಬೆಚ್ಚಿ ಬೀಳಿಸಿದ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ನಡೆದ ಅದೇ ದಿನ ಅದೇ ಮಣಿಪುರದಲ್ಲಿ ಹಿಂಸಾಚಾರದ ನೆಪದಲ್ಲೇ ಮತ್ತಿಬ್ಬರು ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಇಬ್ಬರನ್ನೂ ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಮಣಿಪುರ ಹಿಂಸಾಚಾರ
ಮಣಿಪುರ ಹಿಂಸಾಚಾರ

ಇಂಫಾಲ: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ನಡೆದ ಅದೇ ದಿನ ಅದೇ ಮಣಿಪುರದಲ್ಲಿ ಹಿಂಸಾಚಾರದ ನೆಪದಲ್ಲೇ ಮತ್ತಿಬ್ಬರು ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಇಬ್ಬರನ್ನೂ ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಎನ್ ಡಿಟಿವಿ ವರದಿ ಮಾಡಿದ್ದು, ತಮ್ಮ ಮಗಳ ಪತ್ತೆಯಾಗದಿರುವ ಬಗ್ಗೆ ದೂರು ನೀಡಿರುವ ತಾಯಿ, ಅವರನ್ನು ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಇಬ್ಬರು ಬುಡಕಟ್ಟು ಯುವತಿಯರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಯುವತಿಯರು 21 ಮತ್ತು 24 ವರ್ಷ ವಯಸ್ಸಿನವರಾಗಿದ್ದು, ಕಾರ್ ವಾಶ್ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮೇ 4 ರಂದು ಹತ್ಯೆಗೀಡಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕೆಲಸದಲ್ಲಿದ್ದ ಯುವತಿಯರನ್ನು ಎಳೆದೊಯ್ದು, ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ, ಹತ್ಯೆ
ಪೋಷಕರ ದೂರಿನ ಪ್ರಕಾರ, ಅಂದು ಕಾರ್ ವಾಶ್ ಗ್ಯಾರೆಜ್‌ನಲ್ಲಿ ಯುವತಿಯರು ಕೆಲಸ ಮಾಡುತ್ತಿದ್ದ ವೇಳೆ ಪುರುಷರ ದೊಡ್ಡ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿದೆ. ನಂತರ ಗ್ಯಾರೇಜ್ ಕೊಠಡಿಯೊಳಗೆ ಎಳೆದೊಯ್ದು ಬಾಯಿಗೆ ಬಟ್ಟೆ ತುರುಕಿ, ಸುಮಾರು ಒಂದೂವರೆ ಗಂಟೆಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ನಂತರ ಇಬ್ಬರನ್ನೂ ಹತ್ಯೆಗೈದು ಸಮೀಪದ ಕಾರ್ಖಾನೆಯೊಂದರ ಪಕ್ಕದಲ್ಲಿ ಶವಗಳನ್ನ ಎಸೆದುಹೋಗಿದ್ದಾರೆ ಎನ್ನಲಾಗಿದೆ.

ಶವಗಳ ನೋಡಿ ವ್ಯಕ್ತಿಯೊಬ್ಬರು ನೀಡಿದ್ದ ದೂರು
ಇನ್ನು ಕಾರ್ಖಾನೆ ಆವರಣದಲ್ಲಿ ಇಬ್ಬರು ಯುವತಿಯರ ಶವಗಳನ್ನು ನೋಡಿದ ಸ್ಥಳೀಯ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ಈ ವೇಳೆ ಪರಿಶೀಲನೆ ನಡೆಸಿದ್ದ ಪೊಲೀಸರು ಈ ಪೋಷಕರ ದೂರನ್ನು ಅವಲೋಕಿಸಿ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಬಂದು ಶವಗಳನ್ನು ಪರಿಶೀಲಿಸಿದ ಪೋಷಕರು ಅದು ತಮ್ಮ ಮಕ್ಕಳದ್ದೇ ಎಂದು ಸ್ಪಷ್ಟಪಡಿಸಿದ್ದಾರೆ. 

ಆರಂಭದಲ್ಲಿ ಯುವತಿಯರ ಗುರುತು ಪತ್ತೆ ಮಾಡುವುದು ಕಷ್ಟವಾಗಿತ್ತು. ಕೊನೆಗೆ ಸಂತ್ರಸ್ತರ ತಾಯಿ ಮೇ 16ರಂದು ಸಾಯಿಕುಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿತ್ತು. ಆಕೆ ತನ್ನ ಮಗಳೊಂದಿಗೆ ಮತ್ತೊಬ್ಬಳು ಯುವತಿಯನ್ನ ಅತ್ಯಾಚಾರಗೈದು ಕ್ರೂರವಾಗಿ ಕೊಲೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದರು. ನಂತರ ಎಫ್‌ಐಆರ್ ಅನ್ನು ಇಂಫಾಲ್ ಪೂರ್ವ ಜಿಲ್ಲೆಯ ಪೊರೊಂಪತ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ಸದ್ಯ ಸಂತ್ರಸ್ತರ ಮೃತದೇಹಗಳು ಪತ್ತೆಯಾಗಿಲ್ಲ. ಆದರೆ ಸುಮಾರು 100 ರಿಂದ 200 ಪುರುಷರ ಗುಂಪು ಯುವತಿಯರ ಮೇಲೆ ದಾಳಿ ನಡೆಸಿತ್ತು ಎಂದು ಪೊಲೀಸರು ಶಂಕಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com