RDX ತುಂಬಿದ ಟ್ಯಾಂಕರ್ ನೊಂದಿಗೆ ಗೋವಾಗೆ ಇಬ್ಬರು ಪಾಕ್ ಪ್ರಜೆಗಳ ಪ್ರಯಾಣ: ಮುಂಬೈ ಪೊಲೀಸರಿಗೆ ಬೆದರಿಕೆ ಕರೆ

ಆರ್‌ಡಿಎಕ್ಸ್ ತುಂಬಿದ ಟ್ಯಾಂಕರ್ ಬಗ್ಗೆ ಮುಂಬೈ ಪೊಲೀಸರಿಗೆ ಕರೆ ಬಂದಿದ್ದು ಈ ಟ್ಯಾಂಕರ್ 2 ಪಾಕಿಸ್ತಾನಿ ಪ್ರಜೆಗಳೊಂದಿಗೆ ಮುಂಬೈನಿಂದ ಗೋವಾಕ್ಕೆ ಹೊರಟಿದೆ ಎಂದು ಕರೆ ಮಾಡಿದವರು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪಣಜಿ: ಆರ್‌ಡಿಎಕ್ಸ್ ತುಂಬಿದ ಟ್ಯಾಂಕರ್ ಬಗ್ಗೆ ಮುಂಬೈ ಪೊಲೀಸರಿಗೆ ಕರೆ ಬಂದಿದ್ದು ಈ ಟ್ಯಾಂಕರ್ 2 ಪಾಕಿಸ್ತಾನಿ ಪ್ರಜೆಗಳೊಂದಿಗೆ ಮುಂಬೈನಿಂದ ಗೋವಾಕ್ಕೆ ಹೊರಟಿದೆ ಎಂದು ಕರೆ ಮಾಡಿದವರು ಹೇಳಿದ್ದಾರೆ.

ಮುಂಬೈ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿದ್ದು, ಆರ್‌ಡಿಎಕ್ಸ್ ತುಂಬಿದ ಟ್ಯಾಂಕರ್ ಇಬ್ಬರು ಪಾಕಿಸ್ತಾನಿ ಪ್ರಜೆಗಳೊಂದಿಗೆ ಮುಂಬೈನಿಂದ ಗೋವಾಕ್ಕೆ ಹೊರಟಿದೆ ಎಂದು ತಿಳಿಸಿದ್ದಾರೆ. 'ಮುಂಬೈ ಪೊಲೀಸ್ ಕಂಟ್ರೋಲ್ ರೂಮ್‌ಗೆ ಮಧ್ಯರಾತ್ರಿ 1 ಗಂಟೆಗೆ ಈ ಬೆದರಿಕೆ ಕರೆ ಬಂದಿದೆ. ಆರ್‌ಡಿಎಕ್ಸ್ ತುಂಬಿದ ಬಿಳಿ ಟ್ಯಾಂಕರ್ ಗೋವಾ ಕಡೆಗೆ ಹೋಗುತ್ತಿದ್ದು, ಅದರಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳಿದ್ದಾರೆ ಎಂದು ಹೇಳಿದ್ದಾರೆ.

ಮುಂಬೈ ಪೊಲೀಸರು ತಕ್ಷಣವೇ ಮಹಾರಾಷ್ಟ್ರ ಎಟಿಎಸ್ ಮತ್ತು ಗೋವಾ ಪೊಲೀಸ್ ಕಂಟ್ರೋಲ್ ರೂಂಗೆ ಈ ಬಗ್ಗೆ ಎಚ್ಚರಿಕೆ ನೀಡಿದರು. ಕರೆ ಮಾಡಿದ ವ್ಯಕ್ತಿ ತನ್ನನ್ನು ಪಾಂಡೆ ಎಂದು ಪರಿಚಯಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಕರೆ ಮಾಡಿದ ಸ್ಥಳವನ್ನು ಪತ್ತೆ ಹಚ್ಚಿದ್ದಾರೆ. ಆದರೆ, ಕರೆ ಮಾಡಿದವರ ಗುರುತು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಬೆದರಿಕೆ ಕರೆ ಮಾಡಿದ ವ್ಯಕ್ತಿಯ ಬಗ್ಗೆ ಶೀಘ್ರವೇ ಮಾಹಿತಿ ಸಂಗ್ರಹಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಪೊಲೀಸರಿಗೆ ಇತ್ತೀಚಿನ ದಿನಗಳಲ್ಲಿ ಹಲವು ಬೆದರಿಕೆಗಳು ಬರುತ್ತಿವೆ. ಇದಕ್ಕೂ ಮುನ್ನ ಜುಲೈ 18ರಂದು ಮುಂಬೈ ಪೊಲೀಸರಿಗೆ ನಗರದಲ್ಲಿ ಬಾಂಬ್ ಇಡಲಾಗಿದೆ ಎಂದು ಕರೆ ಬಂದಿತ್ತು. ಎರಡು ದಿನಗಳಲ್ಲಿ ಪೊಲೀಸರಿಗೆ ಇಂತಹ ಕರೆ ಬಂದಿರುವುದು ಇದು ಎರಡನೇ ಬಾರಿ. ಈ ಹಿಂದೆ ಕೂಡ ಇದೇ ರೀತಿಯ ಕರೆ ಬಂದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com