ಮಣಿಪುರ ಹಿಂಸಾಚಾರ: ನಾಳೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಎಪಿ ಕರೆ

ಮಣಿಪುರ ಹಿಂಸಾಚಾರ ಮತ್ತು ಅನಿಶ್ಚಿತ ಪರಿಸ್ಥಿತಿಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ಸೋಮವಾರ ತಿಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ಮಣಿಪುರ ಹಿಂಸಾಚಾರ ಮತ್ತು ಅನಿಶ್ಚಿತ ಪರಿಸ್ಥಿತಿಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ಸೋಮವಾರ ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರ ಖಂಡಿಸಿ ದೆಹಲಿಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಉನ್ನತ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಣಿಪುರ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಹಲವು ವಿರೋಧ ಪಕ್ಷಗಳ ನಾಯಕರು ಸೋಮವಾರ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿದರು.

ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 160ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಮೇ 4 ರಂದು ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋವೊಂದು ಕಳೆದ ವಾರ  ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ಮಣಿಪುರದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com