ಮಣಿಪುರ ಪರಿಸ್ಥಿತಿ ಕುರಿತು ಪ್ರಧಾನಿ ಹೇಳಿಕೆಗೆ ವಿಪಕ್ಷಗಳ ಆಗ್ರಹ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರು ನಿರಂತರ ಪ್ರತಿಭಟನೆಯ ನಡುವೆ ಲೋಕಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ಲೋಕಸಭೆ
ಲೋಕಸಭೆ

ನವದೆಹಲಿ: ಮಣಿಪುರದಲ್ಲಿನ  ಜನಾಂಗೀಯ ಹಿಂಸಾಚಾರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರು ನಿರಂತರ ಪ್ರತಿಭಟನೆಯ ನಡುವೆ ಲೋಕಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಇದಕ್ಕೂ ಮುನ್ನಾ 12 ಗಂಟೆಯವರೆಗೂ ಕಲಾಪವನ್ನು ಮುಂದೂಡಲಾಗಿತ್ತು.

ಮತ್ತೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ವಿರೋಧಪಕ್ಷಗಳ ಸದಸ್ಯರು ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ ಸ್ಪೀಕರ್ ಪೀಠದತ್ತ ಧಾವಿಸಿ ಪ್ರತಿಭಟನೆಯನ್ನು ಮುಂದುವರೆಸಿದವು. ವಿಪಕ್ಷಗಳ ಗದ್ದಲ, ಪ್ರತಿಭಟನೆ ನಡುವೆ ಮೂರು ಮಸೂದೆಗಳನ್ನು ಮಂಡಿಸಲಾಯಿತು. ಈ ಪೈಕಿ ಒಂದನ್ನು ಹಿಂಪಡೆಯಲಾಯಿತು.

ರಾಷ್ಟ್ರೀಯ ದಂತ ಆಯೋಗದ ಮಸೂದೆ 2023,  ರಾಷ್ಟ್ರೀಯ ನರ್ಸಿಂಗ್ ಮತ್ತು ಸೂಲಗಿತ್ತಿ ಆಯೋಗದ ಮಸೂದೆ 2023 ಮತ್ತು ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶ (ತಿದ್ದುಪಡಿ) ಮಸೂದೆ 2023ನ್ನು ಮಂಡಿಸಿದ ಸರ್ಕಾರ  ಡಿಎನ್ ಎ ತಂತ್ರಜ್ಞಾನ ಬಳಕೆ ನಿಯಂತ್ರಣ ಮಸೂದೆ 2019 ನ್ನು ವಾಪಸ್ ಪಡೆದುಕೊಂಡಿತು.

ಈ ಸಂದರ್ಭದಲ್ಲಿ ಮಸೂದೆಗಳ ಕುರಿತು ಚರ್ಚೆ ನಡೆಯಲು ವಿಪಕ್ಷಗಳ ಸದಸ್ಯರು ತಮ್ಮ ಆಸನಗಳಿಗೆ ಹಿಂತಿರುಗುವಂತೆ ಸ್ಪೀಕರ್ ಪೀಠದಲ್ಲಿದ್ದ ರಾಜೇಂದ್ರ ಅಗರವಾಲ್ ಮನವಿ ಮಾಡಿದರು. ಆದರೆ ಇದಕ್ಕೆ ಕಿವಿಗೂಡದ ವಿಪಕ್ಷಗಳ ಸದಸ್ಯರು ಪ್ರತಿಭಟನೆ ಮುಂದುವರೆಸಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com