ಪುಣೆ: ಪತ್ನಿ, ಸೋದರಳಿಯನನ್ನು ಗುಂಡಿಕ್ಕಿ ಕೊಂದು ಎಸಿಪಿ ತಾನೂ ಆತ್ಮಹತ್ಯೆಗೆ ಶರಣು

ಮಹಾರಾಷ್ಟ್ರದ ಪುಣೆ ನಗರದಲ್ಲಿ 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್(ಎಸಿಪಿ) ಒಬ್ಬರು ಸೋಮವಾರ ತಮ್ಮ ಪತ್ನಿ ಮತ್ತು ಸೋದರಳಿಯನನ್ನು ಗುಂಡಿಕ್ಕಿ ಕೊಂದು, ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
ಮೋನಿ ಗಾಯಕ್ವಾಡ್ -  ಭರತ್ ಗಾಯಕ್ವಾಡ್
ಮೋನಿ ಗಾಯಕ್ವಾಡ್ - ಭರತ್ ಗಾಯಕ್ವಾಡ್

ಪುಣೆ: ಮಹಾರಾಷ್ಟ್ರದ ಪುಣೆ ನಗರದಲ್ಲಿ 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್(ಎಸಿಪಿ) ಒಬ್ಬರು ಸೋಮವಾರ ತಮ್ಮ ಪತ್ನಿ ಮತ್ತು ಸೋದರಳಿಯನನ್ನು ಗುಂಡಿಕ್ಕಿ ಕೊಂದು, ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿದ್ದು, ಅವರು ಮನೆಗೆ ಬಂದಿದ್ದ ವೇಳೆ ಈ ದಾರುಣ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ಗಾಯಕ್ವಾಡ್ ಅವರು ಮೊದಲು ತಮ್ಮ ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನ ಸದ್ದು ಕೇಳಿ ಮಗ ಮತ್ತು ಸೋದರಳಿಯ ಓಡಿಬಂದು ಬಾಗಿಲು ತೆರೆದಿದ್ದಾರೆ. ಬಾಗಿಲು ತೆರೆದ ತಕ್ಷಣ ತಮ್ಮ ಸೋದರಳಿಯನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ಗಾಯಕ್ವಾಡ್ ಅವರು ತಮ್ಮ ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಇನ್ನಿಬ್ಬರು ಮೃತರನ್ನು ಪೊಲೀಸ್ ಅಧಿಕಾರಿಯ ಪತ್ನಿ ಮೋನಿ ಗಾಯಕ್ವಾಡ್(44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ.

ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com