ಪಠಾಣ್ ಕೋಟ್ ನಲ್ಲಿ ಮೆಸ್ ಕೆಲಸಗಾರರನಿಂದ ದಾಳಿ, ಮಹಿಳಾ ಐಎಎಫ್ ಅಧಿಕಾರಿ ಸಾವು

ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯಲ್ಲಿ ಮೆಸ್ ಕೆಲಸಗಾರನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳಾ ಭಾರತೀಯ ವಾಯುಪಡೆ (ಐಎಎಫ್) ಅಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪಠಾಣ್ ಕೋಟ್ ವಾಯುನೆಲೆ ಚಿತ್ರ
ಪಠಾಣ್ ಕೋಟ್ ವಾಯುನೆಲೆ ಚಿತ್ರ

ಪಠಾಣ್‌ಕೋಟ್: ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯಲ್ಲಿ ಮೆಸ್ ಕೆಲಸಗಾರನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳಾ ಭಾರತೀಯ ವಾಯುಪಡೆ (ಐಎಎಫ್) ಅಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಐಎಎಫ್ ಅಧಿಕಾರಿ ಭಾನುವಾರ ಸಂಜೆ ಸಾವನ್ನಪ್ಪಿದ್ದಾರೆ ಎಂದು ಪಠಾಣ್‌ಕೋಟ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್ಕಮಲ್‌ಪ್ರೀತ್ ಸಿಂಗ್ ಖಾಖ್ ತಿಳಿಸಿದ್ದಾರೆ.

ಹರಿಯಾಣದ ಪಂಚಕುಲದ ಚಂಡಿಮಂದಿರದಲ್ಲಿರುವ ಸೇನಾ ಕಮಾಂಡ್ ಆಸ್ಪತ್ರೆಯಲ್ಲಿ ಆಕೆಯನ್ನು ದಾಖಲಿಸಲಾಗಿತ್ತು. ಮರಣೋತ್ತರ ಪರೀಕ್ಷೆಯ ನಂತರ ಅಧಿಕಾರಿಯ ದೇಹವನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ. ಜುಲೈ 14 ರಂದು ಪಠಾಣ್‌ಕೋಟ್ ವಾಯುನೆಲೆಯಲ್ಲಿರುವ ತನ್ನ ಅಧಿಕೃತ ನಿವಾಸಕ್ಕೆ ದರೋಡೆ ಮಾಡುವ ಉದ್ದೇಶದಿಂದ ಪ್ರವೇಶಿಸಿದ ನಂತರ ಐಎಎಫ್ ಅಧಿಕಾರಿಯ ಮೇಲೆ ಮೆಸ್ ಕೆಲಸಗಾರ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯ ವೇಳೆ ಮಹಿಳಾ ಅಧಿಕಾರಿ ಮನೆಯಲ್ಲಿ ಒಬ್ಬರೇ ಇದ್ದರು. ಗಾಯಗೊಂಡ ಸ್ಥಿತಿಯಲ್ಲಿದ್ದ ಇವರನ್ನು ನೋಡಿದ ಪಕ್ಕದ ಕ್ವಾರ್ಟಸ್ ನಲ್ಲಿ ವಾಸಿಸುತ್ತಿದ್ದ ಮತ್ತೋರ್ವ ಮಹಿಳಾ ಐಎಎಫ್ ಅಧಿಕಾರಿ ಕೂಡಲೇ ನೆರವಿಗಾಗಿ ಧಾವಿಸಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ನಂತರ ಸೇನೆಯ ಕಮಾಂಡ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆರೋಪಿಯನ್ನು ಮಖನ್ ಸಿಂಗ್ ಎಂದು ಗುರುತಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com