ಮೇಘಾಲಯ ಸಿಎಂ ಕಚೇರಿ ಮೇಲೆ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ

ಪಶ್ಚಿಮ ಮೇಘಾಲಯದ ತುರಾ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಕಚೇರಿ ಮೇಲೆ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸೇರಿದಂತೆ ಕನಿಷ್ಠ 18 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಮೇಘಾಲಯ ಸಿಎಂ ಕಚೇರಿ ಮೇಲಿನ ದಾಳಿ ಚಿತ್ರ
ಮೇಘಾಲಯ ಸಿಎಂ ಕಚೇರಿ ಮೇಲಿನ ದಾಳಿ ಚಿತ್ರ

ಶಿಲ್ಲಾಂಗ್: ಪಶ್ಚಿಮ ಮೇಘಾಲಯದ ತುರಾ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಕಚೇರಿ ಮೇಲೆ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸೇರಿದಂತೆ ಕನಿಷ್ಠ 18 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ರಾತ್ರಿ ನಡೆದ ದಾಳಿಗೆ ಗುಂಪನ್ನು ಪ್ರಚೋದಿಸಿದ ಆರೋಪದ ಮೇಲೆ ಇಬ್ಬರು ತೃಣಮೂಲ ಕಾಂಗ್ರೆಸ್ ನಾಯಕರ ಪತ್ತೆಗೂ ಪೊಲೀಸರು ಶೋಧ ನಡೆಸಿದ್ದಾರೆ.

ತುರಾವನ್ನು ಈಶಾನ್ಯ ರಾಜ್ಯದ ಚಳಿಗಾಲದ ರಾಜಧಾನಿಯನ್ನಾಗಿ ಮಾಡುವಂತೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಅಚಿಕ್ ಕಾನ್ಷಿಯಸ್ ಹೋಲಿಸ್ಟಿಕಲಿ ಇಂಟಿಗ್ರೇಟೆಡ್ ಕ್ರಿಮಾ (ACHIK) ಮತ್ತು ಗಾರೊ ಹಿಲ್ಸ್ ಸ್ಟೇಟ್ ಮೂವ್‌ಮೆಂಟ್ ಕಮಿಟಿಯ (GHSMC) ಮುಖಂಡರೊಂದಿಗೆ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಸಭೆ ನಡೆಸುತ್ತಿದ್ದಾಗ ಬೆಂಕಿ ಹಚ್ಚುವಿಕೆ ಮತ್ತು ಕಟ್ಟಡದ ಮೇಲೆ ದಾಳಿ ನಡೆದಿದೆ. ಹಿಂಸಾಚಾರ ಸಂದರ್ಭದಲ್ಲಿ ಕಟ್ಟಡದೊಳಗಿದ್ದ ಸಿಎಂಗೆ ಯಾವುದೇ ಗಾಯವಾಗಿಲ್ಲ.

ಸಿಎಂ ಕಚೇರಿಯಲ್ಲಿ ಧ್ವಂಸ ಮತ್ತು ಬೆಂಕಿ ಹಚ್ಚಿದ ಆರೋಪದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 18 ಜನರನ್ನು ಬಂಧಿಸಲಾಗಿದೆ. ಕನಿಷ್ಠ 21 ವಾಹನಗಳಿಗೆ ಹಾನಿಯಾಗಿದೆ. ಆರೋಪಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.  

ದಾಳಿ ವೇಳೆ ಗಾಯಗೊಂಡಿರುವ ಪೊಲೀಸರಿಗೆ 50 ಸಾವಿರ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ ತುರಾ ಪಟ್ಟಣದಲ್ಲಿ ಜಿಲ್ಲಾ ಉಪ ಆಯುಕ್ತ ಜಗದೀಶ್ ಚೆಲಾನಿ ರಾತ್ರಿ ಕರ್ಫ್ಯೂ ವಿಧಿಸಿದ್ದು, ಜಿಲ್ಲಾಡಳಿತ ಪ್ರಸ್ತುತ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸುತ್ತಿದೆ ಎಂದು ಮತ್ತೋರ್ವ ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com