ಸ್ವಾತಂತ್ರ್ಯ ನಂತರ SC, ST ಹೊರತುಪಡಿಸಿ ಯಾವುದೇ ಜಾತಿ ಆಧಾರಿತ ಜನಗಣತಿ ನಡೆದಿಲ್ಲ: ಕೇಂದ್ರ

ಸ್ವಾತಂತ್ರ್ಯ ನಂತರ ಪರಿಶಿಷ್ಟ ಜಾತಿ(ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್‌ಟಿ) ಹೊರತುಪಡಿಸಿ ಇತರೆ ಯಾವುದೇ ಜಾತಿವಾರು ಜನಗಣತಿಯನ್ನು ನಡೆಸಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸ್ವಾತಂತ್ರ್ಯ ನಂತರ ಪರಿಶಿಷ್ಟ ಜಾತಿ(ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್‌ಟಿ) ಹೊರತುಪಡಿಸಿ ಇತರೆ ಯಾವುದೇ ಜಾತಿವಾರು ಜನಗಣತಿಯನ್ನು ನಡೆಸಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.

ಮುಂಬರುವ ಜನಗಣತಿಯಲ್ಲಿ ಜಾತಿ ವಿವರಗಳನ್ನು ಸಂಗ್ರಹಿಸಲು ಕೆಲವು ರಾಜಕೀಯ ಪಕ್ಷಗಳು ಮತ್ತು ಕೆಲವು ಸಂಘಟನೆಗಳು ವಿನಂತಿಸಿವೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಹೇಳಿದ್ದಾರೆ.

ಜನಗಣತಿಯಲ್ಲಿ, ಸಂವಿಧಾನ(ಪರಿಶಿಷ್ಟ ಜಾತಿಗಳು)ದ ಆದೇಶ, 1950 ಮತ್ತು ಸಂವಿಧಾನ(ಪರಿಶಿಷ್ಟ ಪಂಗಡಗಳು) ಆದೇಶ, 1950ರ ಪ್ರಕಾರ ಪರಿಶಿಷ್ಟ ಜಾತಿಗಳು(ಎಸ್‌ಸಿಗಳು) ಮತ್ತು ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಎಂದು ನಿರ್ದಿಷ್ಟವಾಗಿ ಅಧಿಸೂಚಿಸಲಾದ ಜಾತಿಗಳು ಮತ್ತು ಬುಡಕಟ್ಟುಗಳನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

"ಸ್ವಾತಂತ್ರ್ಯದ ನಂತರ ಕೇಂದ್ರ ಸರ್ಕಾರವು ಜನಗಣತಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳನ್ನು ಹೊರತುಪಡಿಸಿ ಜಾತಿವಾರು ಜನಗಣತಿ ನಡೆಸಿಲ್ಲ" ಎಂದು ನಿತ್ಯಾನಂದ ರೈ ಅವರು ಲಿಖಿತ ಪ್ರಶ್ನೆಗೆ ಉತ್ತರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com