ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲ್ಲಿದ್ದಲು ಹಗರಣ: ದರ್ದಾ, ಪುತ್ರನಿಗೆ 4 ವರ್ಷ; ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಗುಪ್ತಾಗೆ 3 ವರ್ಷ ಜೈಲು ಶಿಕ್ಷೆ

ಛತ್ತೀಸ್‌ಗಢದಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ವಿಶೇಷ ನ್ಯಾಯಾಲಯ, ರಾಜ್ಯಸಭಾ ಮಾಜಿ ಸಂಸದ ವಿಜಯ್ ದರ್ದಾ ಹಾಗೂ ಅವರ ಪುತ್ರ ದೇವೆಂದರ್ ದರ್ದಾ ಅವರಿಗೆ ತಲಾ ನಾಲ್ಕು ವರ್ಷ ಜೈಲು...

ನವದೆಹಲಿ: ಛತ್ತೀಸ್‌ಗಢದಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ವಿಶೇಷ ನ್ಯಾಯಾಲಯ, ರಾಜ್ಯಸಭಾ ಮಾಜಿ ಸಂಸದ ವಿಜಯ್ ದರ್ದಾ ಹಾಗೂ ಅವರ ಪುತ್ರ ದೇವೆಂದರ್ ದರ್ದಾ ಅವರಿಗೆ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಜುಲೈ 13ರಂದು ದರ್ದಾ ಮತ್ತು ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್‌ಸಿ ಗುಪ್ತಾ ಸೇರಿದಂತೆ ಏಳು ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪು ನೀಡಿದ್ದ ದೆಹಲಿ ಕೋರ್ಟ್, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು.

ಇಂದು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿದ ನ್ಯಾಯಾಲಯ, ವಿಜಯ್ ದರ್ದಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅವರ ಪುತ್ರ ದೇವೆಂದರ್ ದರ್ದಾ, ಎಂ/ಎಸ್ ಜೆಎಲ್‌ಡಿ ಯವತ್ಮಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಮನೋಜ್ ಕುಮಾರ್ ಜಯಸ್ವಾಲ್ ಅವರಿಗೂ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಇದೇ ಪ್ರಕರಣದಲ್ಲಿ ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್‌ಸಿ ಗುಪ್ತಾ, ಇಬ್ಬರು ಹಿರಿಯ ಅಧಿಕಾರಿಗಳಾದ ಕೆಎಸ್ ಕ್ರೋಫಾ ಮತ್ತು ಕೆಸಿ ಸಮ್ರಿಯಾ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ನೀಡಿದೆ.

ಡಿಸೆಂಬರ್ 31, 2005 ರಿಂದ ನವೆಂಬರ್ 2008 ರವರೆಗೆ ಕಲ್ಲಿದ್ದಲು ಕಾರ್ಯದರ್ಶಿಯಾಗಿದ್ದ ಗುಪ್ತಾ ಅವರು ಈಗಾಗಲೇ ಕಲ್ಲಿದ್ದಲು ನಿಕ್ಷೇಪ ಹಂಚಿಕೆಗೆ ಸಂಬಂಧಿಸಿದಂತೆ ಎರಡು ಪ್ರಕರಣಗಳಲ್ಲಿ ತಪ್ಪಿತಸ್ಥರಾಗಿದ್ದು, ಕ್ರಮವಾಗಿ ಎರಡು ಮತ್ತು ಮೂರು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಎರಡೂ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com