ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ಸಲ್ಲಿಕೆ

ಕಾರ್ಗಿಲ್‌ ಯುದ್ಧದಲ್ಲಿ ವಿಜಯ ಸಾಧಿಸಿದ 24ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹುತಾತ್ಮ ವೀರ ಯೋಧರಿಗೆ ದೇಶದಾದ್ಯಂತ ಗೌರವ ಸಲ್ಲಿಸಲಾಗುತ್ತಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಕಾರ್ಗಿಲ್‌ ಯುದ್ಧದಲ್ಲಿ ವಿಜಯ ಸಾಧಿಸಿದ 24ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹುತಾತ್ಮ ವೀರ ಯೋಧರಿಗೆ ದೇಶದಾದ್ಯಂತ ಗೌರವ ಸಲ್ಲಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟರ್ ಮೂಲಕ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಕಾರ್ಗಿಲ್ ವಿಜಯ್ ದಿವಸ್ ಭಾರತದ ವೀರರ ಕಥೆಗಳನ್ನು ಹೇಳುತ್ತದೆ. ಅವರು ಯಾವಾಗಲೂ ದೇಶದ ಜನರಿಗೆ ಸ್ಫೂರ್ತಿಯಾಗಿರುತ್ತಾರೆ. ಈ ವಿಶೇಷ ದಿನದಂದು, ನಾನು ಅವರಿಗೆ ನಮಸ್ಕರಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ಈ ದಿನ ಕೋಟ್ಯಾಂತರ ದೇಶವಾಸಿಗಳಿಗೆ ವಿಜಯದ ದಿನವಾಗಿದೆ. ತಾಯ್ನಾಡನ್ನು ರಕ್ಷಿಸಿದ ಎಲ್ಲಾ ಶಕ್ತಿಶಾಲಿ ಯೋಧರಿಗೆ ಗೌರವ ಸಲ್ಲಿಸುವ ದಿನ ಇದು. ಭಾರತ ಮಾತೆಯ ಧೈರ್ಯಶಾಲಿ ಸೈನಿಕರು ತ್ಯಾಗದಿಂದ ಈ ವಿಜಯ ಸಿಕ್ಕಿದೆ. ದೇಶದ ಸಮಗ್ರತೆಗೆ ಹೋರಾಡಿದ ಎಲ್ಲ ಸೈನಿಕರಿಗೆ ವಂದನೆಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಗಿಲ್ ವಿಜಯ ದಿನ: ಹುತಾತ್ಮ ಯೋಧರಿಗೆ ರಕ್ಷಣಾ ಸಚಿವರ ಗೌರವಾರ್ಪಣೆ, ತ್ಯಾಗ ಬಲಿದಾನದ ಒಂದು ಮೆಲುಕು

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡಿ, ಕಾರ್ಗಿಲ್ ವಿಕಾರ್ಗಿಲ್ ವಿಜಯ್ ದಿವಸದಂದು, ದೇಶವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ಯೋಧರಿಗೆ ನಮನಗಳು! ಎಂದು ಹೇಳಿದ್ದಾರೆ. ಈ ಟ್ವೀಟ್‌ ಜೊತೆ ಕಾರ್ಗಿಲ್‌ ವಿಜಯದ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com