ಜನರನ್ನು ಹಾದಿ ತಪ್ಪಿಸುವ ಉದ್ದೇಶದಿಂದಲೇ 'INDIA' ಹೆಸರಿಟ್ಟುಕೊಂಡಿದ್ದಾರೆ: ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ಬಿಜೆಪಿ ವಾಗ್ದಾಳಿ

ಜನರನ್ನು ಹಾದಿ ತಪ್ಪಿಸುವ ಉದ್ದೇಶದಿಂದಲೇ 'INDIA' ಹೆಸರಿಟ್ಟುಕೊಂಡಿದ್ದಾರೆ ಎಂದು ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಬಿಜೆಪಿ ಸಭೆ (ಸಂಗ್ರಹ ಚಿತ್ರ)
ಬಿಜೆಪಿ ಸಭೆ (ಸಂಗ್ರಹ ಚಿತ್ರ)

ನವದೆಹಲಿ: ಜನರನ್ನು ಹಾದಿ ತಪ್ಪಿಸುವ ಉದ್ದೇಶದಿಂದಲೇ 'INDIA' ಹೆಸರಿಟ್ಟುಕೊಂಡಿದ್ದಾರೆ ಎಂದು ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ, 'ಅವರು ಕೇವಲ "ಜನರನ್ನು ದಾರಿ ತಪ್ಪಿಸುವ" ಹೆಸರಾಗಿ 'ಇಂಡಿಯಾ'ವನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು. ಬಿಜೆಪಿಯ ಸಾಪ್ತಾಹಿಕ ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿ ಈ ಹೇಳಿಕೆ ನೀಡಿದ್ದಾರೆ. "ಭಾರತೀಯ ರಾಷ್ಟ್ರೀಯ ಕಾಂಗ್ರೆಸ್. ಈಸ್ಟ್ ಇಂಡಿಯಾ ಕಂಪನಿ. ಇಂಡಿಯನ್ ಮುಜಾಹಿದೀನ್. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ - ಇವು ಕೂಡ ಇಂಡಿಯಾವೇ... ಕೇವಲ ಇಂಡಿಯಾ ಎಂಬ ಹೆಸರನ್ನು ಬಳಸುವುದರಿಂದ ಏನೂ ಅರ್ಥವಾಗುವುದಿಲ್ಲ ಎಂದು ರವಿಶಂಕರ್ ಪ್ರಸಾದ್ ಸಭೆಯಲ್ಲಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ದ ವಿರೋದ ಪಕ್ಷಗಳ ಮೈತ್ರಿಕೂಟ “ಇಂಡಿಯಾ” ಅವಿಶ್ವಾಸ ಮಂಡನೆ ಮಾಡಿರುವುದು ಭಾರತದ ಮೇಲಿನ ದಾಳಿ ಎಂದು ಹಲವು ಕೇಂದ್ರ ಸಚಿವರು ವಿರೋಧ ಪಕ್ಷಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸಚಿವರಾದ ಎಸ್. ಜೈಶಂಕರ್, ನಿರ್ಮಲಾ ಸೀತಾರಾಮನ್, ಕಿರಣ್ ರಿಜಿಜು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾಂಗ್ರೆಸ್ ಸೇರಿದಂತೆ ವಿರೋದ ಪಕ್ಷಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇಂಡಿಯಾ ಮೈತ್ರಿಕೂಟವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈಸ್ಟ್ ಇಂಡಿಯಾ ಕಂಪನಿ ಅಥವಾ ಇಂಡಿಯನ್ ಮುಜಾಹಿದ್ದೀನ್ ನಡುವೆ ಸಮಾನಾಂತರ ವಿರೋಧ ಪಕ್ಷಗಳ ಮೇಲೆ ಮುಗಿ ಬಿದ್ದಿವೆ. ವಿರೋಧ ಪಕ್ಷಗಳು ಅವಿಶ್ವಾಸ ಗೊತ್ತುವಳಿಯಿಂದ ಹೆದರುವ ಅಗತ್ಯವಿಲ್ಲ. ದೇಶದ ಜನರು ಎಲ್ಲವನ್ನೂ ನೋಡುತ್ತಾರೆ ಎಂದು ಕೇಂದ್ರ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ.

“ಭಾರತದಲ್ಲಿ ಚುನಾಯಿತ ಸರ್ಕಾರವನ್ನು ತೆಗೆಯಲು ಪಾಕಿಸ್ತಾನದ ಸಹಾಯ ಬೇಡಿಕೊಂಡವರು ಈಗ ಇಂಡಿಯಾ ಹೆಸರನ್ನು ಲಾಭ ಮಾಡಿಕೊಳ್ಳಲು ಬಯಸುತ್ತಾರೆ. ಹಿಂದಿ ಮಾತ್ರ ಬಳಸಿ ಉಪನ್ಯಾಸ ನೀಡಿದವರು, ಈಗ ಭಾರತವನ್ನು ಮರೆತು ಐಎನ್‌ಡಿಐಎ ಪರವಾಗಿ ಮಾತನಾಡುತ್ತಾರೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೂರಿದ್ಧಾರೆ.

ವಿರೋಧ ಪಕ್ಷಗಳು ತಮ್ಮ ಮೈತ್ರಿಕೂಟಕ್ಕೆ ಇಂಡಿಯಾ ಎಂದು ಹೆಸರನ್ನು ಬದಲಾಯಿಸುವುದರಿಂದ ಯುಪಿಎಯ ’ಹೌಡಿಂಗ್ ಪಾಸ್ಟ್’ ಅನ್ನು ಅಳಿಸಲಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೇಜ್ರಿವಾಲ್ ತಿರುಗೇಟು
ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಟೀಕಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್‌ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ. ವಿರೋಧ ಪಕ್ಷಗಳು ಒಗ್ಗೂಡಿ ಕೇಂದ್ರ ಸರ್ಕಾರದ ವಿರುದ್ದ ಮುಗಿ ಬಿದ್ದಿರುವುದು ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವರಿಗೆ ಸಹಿಸಲು ಆಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com