ಸುಪ್ರೀಂ ಕೋರ್ಟ್ ಹೇಳುವವರೆಗೂ ಮಣಿಪುರ ಕುರಿತು ಮೌನವಾಗಿದ್ದ ಪ್ರಧಾನಿ ಬಗ್ಗೆ INDIA ವಿಶ್ವಾಸವಿಡುವುದು ಹೇಗೆ?: ಕಪಿಲ್ ಸಿಬಲ್

ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಣಿಪುರದ ವಿಚಾರವಾಗಿ ಸಂಸತ್ತಿನಲ್ಲಿ ಹೇಳಿಕೆ ನೀಡಲೂ ಕೂಡ ಆತ್ಮವಿಶ್ವಾಸವಿಲ್ಲದ ಪ್ರಧಾನಿ ನರೇಂದ್ರ ಮೋದಿ ಮೇಲೆ ಇಂಡಿಯಾ (INDIA) ಹೇಗೆ ವಿಶ್ವಾಸವಿಡುತ್ತದೆ ಎಂದು ಪ್ರಶ್ನಿಸಿದ್ದಾರೆ.
ಕಪಿಲ್ ಸಿಬಲ್
ಕಪಿಲ್ ಸಿಬಲ್

ನವದೆಹಲಿ: ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಣಿಪುರದ ವಿಚಾರವಾಗಿ ಸಂಸತ್ತಿನಲ್ಲಿ ಹೇಳಿಕೆ ನೀಡಲೂ ಕೂಡ ಆತ್ಮವಿಶ್ವಾಸವಿಲ್ಲದ ಪ್ರಧಾನಿ ನರೇಂದ್ರ ಮೋದಿ ಮೇಲೆ ಇಂಡಿಯಾ (INDIA) ಹೇಗೆ ವಿಶ್ವಾಸವಿಡುತ್ತದೆ ಎಂದು ಪ್ರಶ್ನಿಸಿದ್ದಾರೆ.

ಮಣಿಪುರ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಆರ್‌ಎಸ್ ಪಕ್ಷಗಳು ಬುಧವಾರ ಅವಿಶ್ವಾಸ ನಿರ್ಣಯ ಮಂಡಿಸಿದ ಬೆನ್ನಲ್ಲೇ ಸಿಬಲ್ ಈ ಹೇಳಿಕೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಅವಿಶ್ವಾಸ ನಿರ್ಣಯವಿಲ್ಲ. ಸಂಸತ್ತಿನಲ್ಲಿ ಹೇಳಿಕೆ ನೀಡಲು ಪ್ರಧಾನಿಗೆ ವಿಶ್ವಾಸವಿಲ್ಲದಿದ್ದಾಗ; ಮಣಿಪುರದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿಕೆ ನೀಡುವವರೆಗೆ ಅವರು 'ಮೌನ' ವಹಿಸಿದ್ದರು; ಬ್ರಿಜ್ ಭೂಷಣ್ ವಿಚಾರದಲ್ಲಿಯೂ 'ಮೌನ'ವಾಗಿದ್ದಾರೆ. ಯಾವುದೇ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿಲ್ಲ ಎಂದೂ ಅವರು ಹೇಳುತ್ತಾರೆ. ಹೀಗಿರುವಾಗ, I.N.D.I.A ಅವರ ಮೇಲೆ ಹೇಗೆ ವಿಶ್ವಾಸವಿಡಬಹುದು?' ಎಂದು ಸಿಬಲ್ ಪ್ರಶ್ನಿಸಿದ್ದಾರೆ.

ಮಂಗಳವಾರ ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ INDIA (ಭಾರತೀಯ ರಾಷ್ಟ್ರೀಯ ಅಭಿವೃದ್ಧಿಯನ್ನು ಒಳಗೊಂಡ ಮೈತ್ರಿ) ಸಂಸದರು ಭಾಗವಹಿಸಿದ್ದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಿಶ್ವಾವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.

ವಿರೋಧ ಪಕ್ಷದ ನಾಯಕರ ಸಭೆಯಲ್ಲಿ, ಈ ವಿಷಯದ ಬಗ್ಗೆ ಚರ್ಚೆಯನ್ನು ಪ್ರಾರಂಭಿಸಲು ಸರ್ಕಾರವನ್ನು ಒತ್ತಾಯಿಸಲು ಇದು ಪರಿಣಾಮಕಾರಿ ಮಾರ್ಗವಾಗಿದೆ ಎಂದು ವಿವಿಧ ಆಯ್ಕೆಗಳನ್ನು ಅಳೆದು ತೂಗಿದ ನಂತರ ನಿರ್ಧರಿಸಲಾಯಿತು ಎಂದು ಮೈತ್ರಿಕೂಟದ ನಾಯಕರೊಬ್ಬರು ಹೇಳಿದ್ದಾರೆ.

ಕಳೆದ ಗುರುವಾರ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆ 140 ಕೋಟಿ ಭಾರತೀಯರು ನಾಚಿಕೆ ಪಡುವಂತೆ ಮಾಡಿದೆ ಎಂದು ಹೇಳಿದ್ದ ಪ್ರಧಾನಿ ಮೋದಿ, ಕಾನೂನು ತನ್ನ ಸಂಪೂರ್ಣ ಶಕ್ತಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com