ಪ್ರಧಾನಿ ಮೋದಿ ಸಂಸತ್ತಿಗೆ ಬಂದು ಮಣಿಪುರ ವಿಷಯದ ಬಗ್ಗೆ ಮಾತನಾಡಬೇಕು: ಎಎಪಿ ಸಂಸದ ಸಂಜಯ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಬಂದು ಮಣಿಪುರ ಸಮಸ್ಯೆ ಕುರಿತು ಮಾತನಾಡಬೇಕು ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಗುರುವಾರ ಹೇಳಿದ್ದಾರೆ.
ಎಎಪಿ ಸಂಸದ ಸಂಜಯ್ ಸಿಂಗ್
ಎಎಪಿ ಸಂಸದ ಸಂಜಯ್ ಸಿಂಗ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಬಂದು ಮಣಿಪುರ ಸಮಸ್ಯೆ ಕುರಿತು ಮಾತನಾಡಬೇಕು ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಗುರುವಾರ ಹೇಳಿದ್ದಾರೆ.

ಮಣಿಪುರದ ಪರಿಸ್ಥಿತಿಯ ಬಗ್ಗೆ ಪ್ರತಿಪಕ್ಷಗಳು ಪ್ರಧಾನಿ ಮೋದಿಯವರು ಸದನದಲ್ಲಿ ಮಾತನಾಡಬೇಕು ಎಂದು ಒತ್ತಾಯಿಸುತ್ತಿವೆ. ಆದರೆ, ಪ್ರಧಾನಿ ಮೋದಿ INDIA ಒಕ್ಕೂಟವನ್ನು ಭಯೋತ್ಪಾದಕ ಸಂಘಟನೆಗಳೊಂದಿಗೆ ಹೋಲಿಸುವುದರಲ್ಲಿ ನಿರತರಾಗಿದ್ದಾರೆ ಎಂದು ಸಂಜಯ್ ಸಿಂಗ್ ಹೇಳಿದರು.

'ಇಂದು INDIA ಒಕ್ಕೂಟದ ಪ್ರತಿಭಟನೆಯ ನಾಲ್ಕನೇ ದಿನವಾಗಿದ್ದು, ಪ್ರಧಾನಿ ಮೋದಿ ಸಂಸತ್ತಿಗೆ ಬಂದು ಮಣಿಪುರ ವಿಷಯದ ಬಗ್ಗೆ ಮಾತನಾಡಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಮಣಿಪುರ ಹೊತ್ತಿ ಉರಿಯುತ್ತಿದೆ ಮತ್ತು ಜನರು ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಆದರೆ, ಪ್ರಧಾನಿ ಮೋದಿ INDIA ಅನ್ನು ಭಯೋತ್ಪಾದಕ ಗುಂಪುಗಳೊಂದಿಗೆ ಹೋಲಿಸುತ್ತಿದ್ದಾರೆ ಮತ್ತು 2024 ರಲ್ಲಿ ಅಧಿಕಾರಕ್ಕೆ ಬರುತ್ತೇನೆ ಎಂದು ಹೇಳುತ್ತಿದ್ದಾರೆ. ಅವರು ಸ್ವಲ್ಪವಾದರೂ ಸಂವೇದನಾಶೀಲತೆ ತೋರಿಸಬೇಕು' ಎಂದರು.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದಾಗಿನಿಂದಲೂ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಮಣಿಪುರದ ಪರಿಸ್ಥಿತಿಯ ಬಗ್ಗೆ ಸದನದಲ್ಲಿ ವಿವರವಾದ ಚರ್ಚೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಒತ್ತಾಯಿಸುತ್ತಿವೆ. ಜುಲೈ 20ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಪ್ರತಿಭಟನೆ ಮತ್ತು ಘೋಷಣೆಗಳನ್ನು ಕೂಗುತ್ತಿದ್ದಾರೆ. ಇದರಿಂದಾಗಿ ಉಭಯ ಸದನಗಳಲ್ಲಿ ಕಲಾಪ ಅಸ್ತವ್ಯಸ್ತಗೊಂಡಿದೆ.

ಸಭಾಪತಿ ಜಗದೀಪ್ ಧಂಖರ್ ಅವರು ಸೋಮವಾರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರನ್ನು ಸಂಸತ್ತಿನ ಮುಂಗಾರು ಅಧಿವೇಶನದ ಉಳಿದ ಅವಧಿಗೆ ಸಭಾಪತಿಗಳ ನಿರ್ದೇಶನಗಳನ್ನು 'ಪದೇ ಪದೆ ಉಲ್ಲಂಘಿಸಿದ್ದಾರೆ' ಎಂದು ಅಮಾನತುಗೊಳಿಸಿದ್ದಾರೆ.

ಇನ್ನು ತಮ್ಮನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಿರುವುದರ ವಿರುದ್ಧ ಸಂಸತ್ತಿನ ಆವರಣದಲ್ಲಿ ಸಂಜಯ್ ಸಿಂಗ್ ಪ್ರತಿಭಟನೆ ನಡೆಸುತ್ತಿದ್ದಾರೆ. ವಿರೋಧ ಪಕ್ಷಗಳ ಒಕ್ಕೂಟವಾದ INDIA ದಿಂದ ಹಲವರು ಸಿಂಗ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ನನ್ನೆಯಷ್ಟೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಿಂಗ್ ಅವರನ್ನು ಭೇಟಿ ಮಾಡಿ, ನಮ್ಮ ಬೆಂಬಲ ನಿಮ್ಮೊಂದಿಗೆ ಇರುತ್ತದೆ ಎಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com