ದೆಹಲಿ ಸುಗ್ರೀವಾಜ್ಞೆ ಮಸೂದೆ: ಎನ್‌ಡಿಎಗೆ ಬೆಂಬಲ ನೀಡಲು ವೈಎಸ್‌ಆರ್‌ ಕಾಂಗ್ರೆಸ್‌ ನಿರ್ಧಾರ

ಎನ್‌ಡಿಎಯಿಂದ ಅಂತರ ಕಾಯ್ದುಕೊಂಡಿದ್ದ ವೈಆರ್‌ಎಸ್‌ ಕಾಂಗ್ರೆಸ್‌ ಪಕ್ಷ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ನಿರ್ಧರಿಸಿದೆ ಎಂದು ವರದಿಯಾಗಿದೆ.
ಜಗನ್ ಮೋಹನ್ ರೆಡ್ಡಿ
ಜಗನ್ ಮೋಹನ್ ರೆಡ್ಡಿ

ನವದೆಹಲಿ: ಎನ್‌ಡಿಎಯಿಂದ ಅಂತರ ಕಾಯ್ದುಕೊಂಡಿದ್ದ ವೈಆರ್‌ಎಸ್‌ ಕಾಂಗ್ರೆಸ್‌ ಪಕ್ಷ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಆರ್‌ಎಸ್‌ ಕಾಂಗ್ರೆಸ್‌ ಬಿಜೆಪಿಯನ್ನು ಬೆಂಬಲಿಸಲಿದೆ. ಈ ಮೂಲಕ ಅವಿಶ್ವಾಸ ನಿರ್ಣಯದ ವಿರುದ್ಧ ಮತ ಚಲಾಯಿಸಲಿದೆ ಎಂದು ವೈಆರ್‌ಎಸ್‌ ಕಾಂಗ್ರೆಸ್‌ ಉನ್ನತ ಮೂಲಗಳು ತಿಳಿಸಿವೆ.

ಬಿಜೆಪಿ ಮಂಡಿಸುವ ಮಸೂದೆಗಳಿಗೂ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಬೆಂಬಲ ನೀಡಲಿದೆ ಎಂದು ವೈಆರ್‌ಎಸ್‌ ಕಾಂಗ್ರೆಸ್‌ ಪಕ್ಷದ ರಾಜ್ಯಸಭೆಯ ನಾಯಕ ವಿ. ವಿಜಯಸಾಯಿ ರೆಡ್ಡಿ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿ ನವದೆಹಲಿಯ ನಾಗರಿಕ ಸೇವೆಗಳ ಮೇಲಿನ ತನ್ನ ಅಧಿಕಾರ ಮತ್ತು ನಿಯಂತ್ರಣಕ್ಕಾಗಿ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಗೆ ಸಂಸತ್‍ನ ಉಭಯಸದನಗಳಲ್ಲಿ ಬೆಂಬಲ ನೀಡುವುದಾಗಿ ವೈಎಸ್‍ಆರ್ ಕಾಂಗ್ರೆಸ್ ಘೋಷಿಸಿದೆ. ಎರಡು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಈ ಮಸೂದೆಯನ್ನು ಸಂಸತ್‍ನ ಉಭಯಸದನಗಳಾದ ರಾಜ್ಯ ಸಭೆ ಮತ್ತು ಲೋಕಸಭೆಗಳಲ್ಲಿ ಮಂಡಿಸಲು ಸುಗ್ರೀವಾಜ್ಞೆ ಹೊರಡಿಸಿತ್ತು.

ಮತ್ತೊಂದು ವಿಶೇಷವೆಂದರೆ, ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಅವಿಶ್ವಾಸ ನಿರ್ಣಯ ಮಂಡಿಸಿರುವ ಸಂದರ್ಭದಲ್ಲೇ ಈ ಮಸೂದೆಗೆ ಬೆಂಬಲ ನೀಡುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗಮೋಹನ್‍ರೆಡ್ಡಿ ನೇತೃತ್ವದ ವೈಎಸ್‍ಆರ್‍ಸಿ ಪಕ್ಷ ಹೇಳಿರುವುದು ಭಾರೀ ಮಹತ್ವ ಪಡೆದುಕೊಂಡಿದೆ.

ವೈಎಸ್‍ಆರ್‍ಸಿ ಪಕ್ಷದ ಈ ನಿರ್ಧಾರದಿಂದಾಗಿ ರಾಜ್ಯಸಭೆಯಲ್ಲಿ ಅಲ್ಪಮತಗಳ ಬಹುಮತದ ಕೊರತೆ ಎದುರಿಸುತ್ತಿದ್ದ ಬಿಜೆಪಿಗೆ ಇದು ಆನೆಬಲ ತಂದಂತಾಗಿದೆ. ಲೋಕಸಭೆಯಲ್ಲಿ ಪೂರ್ಣ ಬಹುಮತ ಹೊಂದಿದ್ದರೂ ಎನ್‍ಡಿಎಗೆ ರಾಜ್ಯಸಭೆಯಲ್ಲಿ ಕೆಲವೇ ಮತಗಳ ಕೊರತೆ ಎದುರಾಗಿತ್ತು. ಪ್ರಸ್ತುತ ಲೋಕಸಭೆಯಲ್ಲಿ 22 ಹಾಗೂ ರಾಜ್ಯಸಭೆಯಲ್ಲಿ 9 ಸದಸ್ಯರನ್ನು ಹೊಂದಿರುವ ವೈಎಸ್‍ಆರ್‍ಸಿ ಪಕ್ಷವು ಎನ್‍ಡಿಎಗೆ ಬೆಂಬಲ ಸೂಚಿಸಿರುವುದರಿಂದ ವಿವಾದಾತ್ಮಕ ಈ ಮಸೂದೆ ಅಂಗೀಕಾರವಾಗುವುದು ನಿಚ್ಚಳವಾಗಿದೆ.

ನಾವು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಕೊಡುತ್ತೇವೆ. ಸಂಸತ್‍ನ ಎರಡು ಸದನಗಳಲ್ಲಿ ಸರ್ಕಾರದ ಪರವಾಗಿ ಮತ ಚಲಾಯಿಸುತ್ತೇವೆ ಎಂದು ವೈಎಸ್‍ಆರ್‍ಸಿ ಪಕ್ಷದ ಮುಖಂಡ ವಿ.ವಿಜಯಸಾಯಿರೆಡ್ಡಿ ಹೇಳಿದ್ದಾರೆ. ಕೆಲ ದಿನಗಳ ಹಿಂದೆ ಸಿಎಂ ಜಗಮೋಹನ್‍ರೆಡ್ಡಿಯವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದೆವು. ಇದೀಗ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿರುವುದು ಆಡಳಿತರೂಢ ಪಕ್ಷಕ್ಕೆ ಹೆಚ್ಚಿನ ಬಲ ಬಂದಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com