ದೆಹಲಿ-ಮುಂಬೈ ವಿಮಾನದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; 47 ವರ್ಷದ ಪ್ರೊಫೆಸರ್ ಬಂಧನ

ದೆಹಲಿ-ಮುಂಬೈ ವಿಮಾನದಲ್ಲಿ ವೈದ್ಯೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 47 ವರ್ಷದ ಪ್ರೊಫೆಸರ್ ಅನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ದೆಹಲಿ-ಮುಂಬೈ ವಿಮಾನದಲ್ಲಿ ವೈದ್ಯೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 47 ವರ್ಷದ ಪ್ರೊಫೆಸರ್ ಅನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಬುಧವಾರ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದರು.

24 ವರ್ಷದ ಸಂತ್ರಸ್ತೆ ಮತ್ತು ಆರೋಪಿ ದೆಹಲಿಯಿಂದ ಬೆಳಿಗ್ಗೆ 5.30ಕ್ಕೆ ಟೇಕಾಫ್ ಆದ ವಿಮಾನದಲ್ಲಿ ಪರಸ್ಪರ ಪಕ್ಕದಲ್ಲಿ ಕುಳಿತಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಕೆಲವೇ ಕ್ಷಣಗಳ ಮುನ್ನ ಆರೋಪಿ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ವೈದ್ಯೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಇದೇ ವಿಚಾರವಾಗಿ ಇಬ್ಬರು ಪ್ರಯಾಣಿಕರ ನಡುವೆ ವಾಗ್ವಾದ ನಡೆಯಿತು. ನಂತರ ಸಂತ್ರಸ್ತೆ ಈ ವಿಚಾರವನ್ನು ವಿಮಾನದ ಸಿಬ್ಬಂದಿಗೆ ತಿಳಿಸಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಅವರು ಸಹರ್ ಪೊಲೀಸ್ ಠಾಣೆಗೆ ತೆರಳಿದರು ಎಂದು ಅವರು ಹೇಳಿದರು.

ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜಾಮೀನು ಮಂಜೂರು ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com