ದೇಶ

ರತನ್ ಟಾಟಾಗೆ ಮಹಾರಾಷ್ಟ್ರ ಸರ್ಕಾರದ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿ

ರತನ್ ಟಾಟಾಗೆ ಮಹಾರಾಷ್ಟ್ರ ಸರ್ಕಾರದ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿ
ಉದ್ಯಮಿ ರತನ್ ಟಾಟಾ
Published On :

ಮುಂಬೈ:  ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್‌ನ  ಅಧ್ಯಕ್ಷ ರತನ್ ಟಾಟಾ ಅವರಿಗೆ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ.

ಯುವ ಉದ್ಯಮಿ, ಮಹಿಳಾ ಉದ್ಯಮಿ ಮತ್ತು ಮರಾಠಿ ಉದ್ಯಮಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಸಾಮಂತ್ ರಾಜ್ಯ ವಿಧಾನ ಪರಿಷತ್ತಿನಲ್ಲಿ ಘೋಷಿಸಿದರು.

ಗಣ್ಯರಿಗೆ ನೀಡಲಾಗುವ ಮಹಾರಾಷ್ಟ್ರ ಭೂಷಣ ಪ್ರಶಸ್ತಿಯಂತೆಯೇ, ರತನ್ ಟಾಟಾ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿಯನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಮತ್ತು ಕೈಗಾರಿಕೆ ಸಚಿವರನ್ನು ಒಳಗೊಂಡ ಸಮಿತಿ ಸಭೆ ನಡೆಸಿದೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.