ಮಣಿಪುರ ಹಿಂಸಾಚಾರ: ಪ್ರಧಾನಿ ನರೇಂದ್ರ ಮೋದಿ ಮೌನ ಪ್ರಶ್ನಿಸಿದ ಸಚಿನ್ ಪೈಲಟ್

ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಮಣಿಪುರ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿದ್ದಾರೆ ಮತ್ತು ಹಿಂಸಾಚಾರವನ್ನು ತಗ್ಗಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರವು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಸಚಿನ್ ಪೈಲಟ್
ಸಚಿನ್ ಪೈಲಟ್

ಜೈಪುರ: ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಮಣಿಪುರ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿದ್ದಾರೆ ಮತ್ತು ಹಿಂಸಾಚಾರವನ್ನು ತಗ್ಗಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರವು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಟೋಂಕ್‌ನಲ್ಲಿ ಗುರುವಾರ ಕಾಂಗ್ರೆಸ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಹರಿಪ್ರಸಾದ್ ಬೈರವ ಅವರನ್ನು ನೇಮಕ ಮಾಡಿದ ನಂತರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಣಿಪುರದಲ್ಲಿ ಅತ್ಯಾಚಾರ ಮತ್ತು ಕೊಲೆಗಳು ಪ್ರತಿನಿತ್ಯ ನಡೆಯುತ್ತಲೇ ಇವೆ. 'ಕಳೆದ ಮೂರು ತಿಂಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಪ್ರಧಾನಿ ಮೋದಿ ಮೌನವಾಗಿರಲು ಪ್ರತಿಜ್ಞೆ ಮಾಡಿರುವಂತಿದೆ. ಬಿಜೆಪಿ ಸರ್ಕಾರ ವಿಫಲವಾಗಿದೆ. ಇಷ್ಟಾದರೂ ಪ್ರಧಾನಿ ಈ ವಿಚಾರದಲ್ಲಿ ಮೌನವಾಗಿಯೇ ಇದ್ದಾರೆ. ಸಂಸತ್ತು ಕಾರ್ಯನಿರ್ವಹಿಸುತ್ತಿದೆ ಆದರೆ ಮಣಿಪುರದ ಬಗ್ಗೆ ಚರ್ಚಿಸಲು ಬಿಜೆಪಿ ಸಿದ್ಧವಿಲ್ಲ' ಎಂದು ಅವರು ಹೇಳಿದರು.

ಆದಾಗ್ಯೂ, ಮಾಜಿ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರ 'ಲಾಲ್ ಡೈರಿ' ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸದ ಪೈಲಟ್, ರಾಜಸ್ಥಾನದಲ್ಲಿ ಪ್ರತಿಪಕ್ಷದ ಪಾತ್ರದಲ್ಲಿಯೂ ಬಿಜೆಪಿ ವಿಫಲವಾಗಿದೆ ಎಂದು ಅವರು ಹೇಳಿದರು.

ಬಿಜೆಪಿ ನೇತೃತ್ವದ ಕೇಂದ್ರವು ರಾಜಸ್ಥಾನ ಸರ್ಕಾರದ ವಿರುದ್ಧ ತಾರತಮ್ಯ ಮಾಡುತ್ತಿದೆ. ಕೇಂದ್ರ ಸರ್ಕಾರವು ರಾಜಸ್ಥಾನದಲ್ಲಿ ಕಲ್ಯಾಣ ಯೋಜನೆಗಳಿಗೆ ಹಣವನ್ನು ನೀಡುತ್ತಿಲ್ಲ. ವಾಸ್ತವದಲ್ಲಿ, ಪ್ರಧಾನ ಮಂತ್ರಿಗಳು ರಾಜ್ಯದ ಇಆರ್‌ಸಿಪಿ ಯೋಜನೆ ಬಗ್ಗೆಯೂ ಮಾತನಾಡುವುದರಿಂದ ದೂರ ಉಳಿದಿದ್ದಾರೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com