ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳಲಿರುವ ಶರದ್ ಪವಾರ್: INDIA ನಾಯಕರ ಅಸಮಾಧಾನ

ಆಗಸ್ಟ್ 1 ರಂದು ಪುಣೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎನ್ ಸಿಪಿ ವರಿಷ್ಠ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದಕ್ಕೆ ವಿಪಕ್ಷಗಳ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಶರದ್ ಪವಾರ್
ಶರದ್ ಪವಾರ್

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಾಗಿರುವ ಕಾಂಗ್ರೆಸ್ ನೇತೃತ್ವದ INDIA ಒಕ್ಕೂಟ (ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲಯನ್ಸ್ ) ಆಗಸ್ಟ್ 25 ಮತ್ತು 25 ರಂದು ಮುಂಬೈನಲ್ಲಿ ಮುಂದಿನ ಸಭೆ ನಡೆಸಲು ತೀರ್ಮಾನಿಸಿವೆ. ಆದರೆ, ಆಗಸ್ಟ್ 1 ರಂದು ಪುಣೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎನ್ ಸಿಪಿ ವರಿಷ್ಠ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದಕ್ಕೆ ವಿಪಕ್ಷಗಳ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಶುಕ್ರವಾರ ನಡೆದ ಇಂಡಿಯಾ ಒಕ್ಕೂಟದ ನಾಯಕರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ನೀಡಿ ಗೌರವಿಸುವ ಸಮಾರಂಭಕ್ಕೆ ಪವಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ  ಬಗ್ಗೆ ಕೆಲವು ಸದಸ್ಯರು ಕಳವಳ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಹಿರಿಯ ನಾಯಕನೊಂದಿಗೆ ಮಾತನಾಡಿ ಸಮಾರಂಭಕ್ಕೆ ಹಾಜರಾಗದಂತೆ ಒತ್ತಾಯಿಸುವಂತೆ ಸಲಹೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಸಮಾನ ಮನಸ್ಕ ವಿರೋಧ ಪಕ್ಷಗಳು ಒಗ್ಗೂಡುತ್ತಿರುವಾಗ ಇಂಡಿಯಾ ಒಕ್ಕೂಟವನ್ನು ಈಸ್ಟ್ ಇಂಡಿಯಾ ಕಂಪನಿ ಮತ್ತು ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದೀನ್‌ಗೆ ಹೋಲಿಸಿರುವ ಮೋದಿಯವರೊಂದಿಗೆ ಶರದ್ ಪವಾರ್ ವೇದಿಕೆ ಹಂಚಿಕೊಳ್ಳುವುದು  ಜನರಲ್ಲಿ ತಪ್ಪು ಸಂದೇಶ ರವಾನಿಸಲು ಕಾರಣವಾಗುತ್ತದೆ ಎಂದು ವಿಪಕ್ಷಗಳ ನಾಯಕರು ಹೇಳಿರುವುದಾಗಿ ಮೂಲಗಳು ಹೇಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com