ರಾಹುಲ್ ಗಾಂಧಿ ಮದುವೆ ಯಾವಾಗ? ಪ್ರಶ್ನೆ ಕೇಳಿದ ಹರ್ಯಾಣ ಮಹಿಳೆಗೆ ಸೋನಿಯಾ ಗಾಂಧಿ ಹೇಳಿದ್ದೇನು?

ನವದೆಹಲಿ: ರಾಹುಲ್ ಗಾಂಧಿ ಮದುವೆ ಯಾವಾಗ ಎಂದು ರೈತ ಮಹಿಳೆಯರು ಕೇಳಿದ ಪ್ರಶ್ನೆಗೆ ಸೋನಿಯಾ ಗಾಂಧಿ ಉತ್ತರಿಸಿದ್ದಾರೆ.
ಹರಿಯಾಣದ ಸೋನಿಪತ್ನ ರೈತ ಮಹಿಳೆಯರೊಂದಿಗೆ ಸೋನಿಯಾಗಾಂಧಿ ಸಂವಾದದಲ್ಲಿ ತೊಡಗಿದ್ದರು, ಈ ವೇಳೆ ಮಹಿಳೆಯೊಬ್ಬರು ರಾಹುಲ್ ಗಾಂಧಿ ಮದುವೆ ಯಾವಾಗ ಎಂದು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ಸೋನಿಯಾಗಾಂಧಿ ನೀವೇ ಹುಡುಗಿಯನ್ನು ಹುಡುಕಿ ಎಂದು ಹೇಳಿದರು. ಈ ವೇಳೆ ಮಾತನಾಡಿದ ರಾಹುಲ್ ಅದು ಆಗುತ್ತದೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಮಹಿಳೆಯರ ಹೊಲಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸೋನಿಯಾ ಗಾಂಧಿ , ತಮ್ಮ ನಿವಾಸದಲ್ಲಿ ರೈತ ಮಹಿಳೆಯರಿಗೆ ಭೋಜನಕೂಟ ಏರ್ಪಡಿಸುವ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ರೈತ ಮಹಿಳೆಯರನ್ನ ಪ್ರಿಯಾಂಕಾ ಗಾಂಧಿ ಮನೆಗೆ ಆಹ್ವಾನಿಸಿ, ಸೋನಿಯಾ ಗಾಂಧಿ ಜೊತೆಗೆ ಭೋಜನಕ್ಕೆ ವ್ಯವಸ್ಥೆ ಮಾಡಿದ್ದರು.
ಹೀಗೆ ಮನೆಗೆ ಬಂದ ರೈತ ಮಹಿಳೆಯರ ಪೈಕಿ ಓರ್ವ ಮಹಿಳೆ ರಾಹುಲ್ ಗಾಂಧಿ ಅವರ ಮದುವೆ ಯಾವಾಗ? ಮಾಡಲಿದ್ದೀರಿ ಎಂದು ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ನಗುತ್ತಲೇ ಉತ್ತರಿಸಿದ ಸೋನಿಯಾ ಗಾಂಧಿ ʻನೀವೆ ಹುಡುಗಿಯನ್ನ ಹುಡುಕಿ..ʼ ಎಂದು ಚಟಾಕಿ ಹಾರಿಸಿದ್ದಾರೆ. ರಾಹುಲ್ ಗಾಂಧಿ ಹಂಚಿಕೊಂಡಿರುವ ಈ ವಿಡಿಯೋ ಜಾಲತಾಣದಲ್ಲಿ ಸದ್ದು ಮಾಡ್ತಿದೆ.
ಔತಣ ಕೂಟದ ವೇಳೆ ಮಹಿಳೆಯರ ಜೊತೆಗೆ ಆಹಾರ, ಮಹಿಳಾ ಸಬಲೀಕರಣ ಮತ್ತು GST ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸರ್ಕಾರ ನನ್ನ ಮನೆಯನ್ನು ಕಿತ್ತುಕೊಂಡ ಹಿನ್ನಲೆ ಪ್ರಿಯಾಂಕಾ ಗಾಂಧಿ ಅವರ ಮನೆಗೆ ಆಹ್ವಾನಿಸಿದ್ದೇನೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


