ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ; ಸಂಭಾಜಿ ಭಿಡೆ ವಿರುದ್ಧ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ: ಫಡ್ನವಿಸ್

ಮಹಾತ್ಮಾ ಗಾಂಧಿಯವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಲಪಂಥೀಯ ಕಾರ್ಯಕರ್ತ ಸಂಭಾಜಿ ಭಿಡೆ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಸಂಭಾಜಿ ಭಿಡೆ-ದೇವೇಂದ್ರ ಫಡ್ನವೀಸ್
ಸಂಭಾಜಿ ಭಿಡೆ-ದೇವೇಂದ್ರ ಫಡ್ನವೀಸ್

ನಾಗ್ಪುರ/ಅಮರಾವತಿ: ಮಹಾತ್ಮಾ ಗಾಂಧಿಯವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಲಪಂಥೀಯ ಕಾರ್ಯಕರ್ತ ಸಂಭಾಜಿ ಭಿಡೆ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 

ಅಮರಾವತಿಯಲ್ಲಿ ನಡೆದ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಗಾಂಧೀಜಿಯವರ ವಂಶಾವಳಿಯ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಭಿಡೆ ವಿರುದ್ಧ ಅಮರಾವತಿಯ ರಾಜಪೇತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವಿಸ್, 'ಸಂಭಾಜಿ ಭಿಡೆ ಅವರ ಹೇಳಿಕೆಯನ್ನು ನಾನು ಸಂಪೂರ್ಣವಾಗಿ ಖಂಡಿಸುತ್ತೇನೆ. ಮಹಾತ್ಮ ಗಾಂಧಿಯವರು ರಾಷ್ಟ್ರಪಿತ ಮತ್ತು ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ. ಮಹಾತ್ಮನ ವಿರುದ್ಧದ ಇಂತಹ ಹೇಳಿಕೆಗಳು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಹೇಳಿದರು.

ಬಿಜೆಪಿಗೂ ಸಂಭಾಜಿ ಭಿಡೆಗೂ ಯಾವುದೇ ಸಂಬಂಧವಿಲ್ಲ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಜನರಲ್ಲಿ ಕೋಪವನ್ನು ಹುಟ್ಟುಹಾಕುವ ಮತ್ತು ಗಾಂಧೀಜಿಯನ್ನು ಅವಮಾನಿಸುವ ಕಾರಣದಿಂದ ಇಂತಹ ಹೇಳಿಕೆಗಳನ್ನು ನೀಡಲಾಗುವುದಿಲ್ಲ, ಸಹಿಸುವುದಿಲ್ಲ. ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಭಿಡೆ ಅವರು ಸ್ವತಂತ್ರ ಸಂಸ್ಥೆಯನ್ನು (ಶ್ರೀ ಶಿವ ಪ್ರತಿಷ್ಠಾನ ಹಿಂದೂಸ್ತಾನ್) ನಡೆಸುತ್ತಿದ್ದಾರೆ ಮತ್ತು ಬಿಜೆಪಿಯೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಫಡ್ನವಿಸ್ ಹೇಳಿದ್ದಾರೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡಬಾರದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com