2022-23ನೇ ಹಣಕಾಸು ವರ್ಷದಲ್ಲಿ ಸುಮಾರು 5.83 ಕೋಟಿ ಐಟಿ ರಿಟರ್ನ್ಸ್ ಸಲ್ಲಿಕೆ!

2022-23ರ ಹಣಕಾಸು ವರ್ಷದಲ್ಲಿ ಗಳಿಸಿದ ಆದಾಯಕ್ಕಾಗಿ ಸುಮಾರು 5.83 ಕೋಟಿ ಐಟಿ ರಿಟರ್ನ್ಸ್‌ ಸಲ್ಲಿಕೆಯಾಗಿದೆ. ಇದು ಕಳೆದ ವರ್ಷ ಜುಲೈ 31 ರವರೆಗೆ ಸಲ್ಲಿಕೆಯಾಗಿದ್ದ ಐಟಿಆರ್‌ಗಳ ಸಂಖ್ಯೆಯನ್ನು ಮೀರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

 ನವದೆಹಲಿ: 2022-23ರ ಹಣಕಾಸು ವರ್ಷದಲ್ಲಿ ಗಳಿಸಿದ ಆದಾಯಕ್ಕಾಗಿ ಸುಮಾರು 5.83 ಕೋಟಿ ಐಟಿ ರಿಟರ್ನ್ಸ್‌ ಸಲ್ಲಿಕೆಯಾಗಿದೆ. ಇದು ಕಳೆದ ವರ್ಷ ಜುಲೈ 31 ರವರೆಗೆ ಸಲ್ಲಿಕೆಯಾಗಿದ್ದ ಐಟಿಆರ್‌ಗಳ ಸಂಖ್ಯೆಯನ್ನು ಮೀರಿಸಿದೆ. ವೇತನದಾರರು ಹಿಂದಿನ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ.

ಜುಲೈ 30ರ ಮಧ್ಯಾಹ್ನ 1 ಗಂಟೆಯವರೆಗೂ ಸುಮಾರು  5.83 ಕೋಟಿ ಐಟಿ ರಿಟರ್ನ್ಸ್ ಸಲ್ಲಿಸಲಾಗಿದೆ. ಇದು ಕಳೆದ ವರ್ಷದ ಜುಲೈ 31ರವರೆಗೆ ಸಲ್ಲಿಕೆಯಾಗಿದ್ದ ಐಟಿಆರ್ ಗಳ ಸಂಖ್ಯೆಯನ್ನು ಮೀರಿಸಿದೆ ಎಂದು ಐಟಿ ಇಲಾಖೆ ಟ್ವೀಟ್ ಮಾಡಿದೆ.  ಭಾನುವಾರ ಮಧ್ಯಾಹ್ನ 1 ಗಂಟೆಯವರೆಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿ 46 ಲಕ್ಷಕ್ಕೂ ಹೆಚ್ಚು ಯಶಸ್ವಿ ಫೈಲಿಂಗ್ ಲಾಗಿನ್‌ಗಳು ಕಂಡುಬಂದಿವೆ ಎಂದು ಇಲಾಖೆ ತಿಳಿಸಿದೆ.

"ಇಂದು ಮಧ್ಯಾಹ್ನ 1 ಗಂಟೆಯವರೆಗೆ 10.39 ಲಕ್ಷ ಐಟಿಆರ್‌ಗಳನ್ನು ಸಲ್ಲಿಸಲಾಗಿದೆ ಮತ್ತು ಕಳೆದ 1 ಗಂಟೆಯಲ್ಲಿ 3.04 ಲಕ್ಷ ಐಟಿಆರ್‌ಗಳನ್ನು ಸಲ್ಲಿಸಲಾಗಿದೆ" ಎಂದು ಐಟಿ ಇಲಾಖೆ  ಇಂದು ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com