ಜಮ್ಮು ಮತ್ತು ಕಾಶ್ಮೀರ: ಉಧಂಪುರದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ವ್ಯಕ್ತಿ ಸಾವು, ತನಿಖೆಗೆ ಆದೇಶ

ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ 35 ವರ್ಷದ ವ್ಯಕ್ತಿಯೊಬ್ಬರ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದು ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಉಧಮ್‌ಪುರ(ಜಮ್ಮು): ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ 35 ವರ್ಷದ ವ್ಯಕ್ತಿಯೊಬ್ಬರ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದು ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ.

ಈ ಸಂಬಂಧ ಮೃತ ರಥಿಯಾನ್ ಗ್ರಾಮದ ನಿವಾಸಿ ದಲೀಪ್ ಸಿಂಗ್ ಅವರ ಸಂಬಂಧಿಕರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ್ದು, ಅವರ ಸಾವಿಗೆ ನಿಖರ ಕಾರಣಕ್ಕಾ ನ್ಯಾಯಯುತ ತನಿಖೆಗೆ ಒತ್ತಾಯಿಸಿದರು.

ಉಧಮ್‌ಪುರ ಜಿಲ್ಲಾ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿ ದಲೀಪ್ ಸಿಂಗ್ ಅವರನ್ನು ರೋಗಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಘಟನೆ ವೇಳೆ ರೋಗಿಯ ಪತಿ ಮತ್ತು ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಯಿಂದ ಓಡಿಹೋಗಿದ್ದು ಸಿಂಗ್ ಸಿಕ್ಕಿಬಿದ್ದಿದ್ದಾರೆ ಎಂದು ಅವರು ಹೇಳಿದರು. ನಂತರ ಸಿಂಗ್ ಅವರನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಆನಂತರ ಅವರನ್ನು ಮಧ್ಯರಾತ್ರಿಯಲ್ಲಿ ಮಹಿಳಾ ಪೊಲೀಸ್ ಠಾಣೆಗೆ ಸ್ಥಳಾಂತರಿಸಿದರು.

ಎರಡು ಗಂಟೆಗಳ ನಂತರ, ಲಾಕಪ್‌ನಲ್ಲಿ ಸಿಂಗ್ ಎದೆನೋವು ಎಂದು ಹೇಳಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಸಿಂಗ್ ಮೃತಟ್ಟಿದ್ದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿನ ಸುದ್ದಿ ತಿಳಿದ ಅವರ ಸಂಬಂಧಿಕರು ಆಸ್ಪತ್ರೆ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಉಧಂಪುರ ಹೆಚ್ಚುವರಿ ಉಪ ಕಮಿಷನರ್ ಜೋಗಿಂದರ್ ಸಿಂಗ್ ಜಸ್ರೋಟಿಯಾ ನೇತೃತ್ವದಲ್ಲಿ ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com