ಐದು ರಾಜ್ಯಗಳಿಗೆ ಕಾಂಗ್ರೆಸ್ ವೀಕ್ಷಕರ ನೇಮಕ; ಶಶಿಕಾಂತ್ ಸೆಂಥಿಲ್ ಗೆ ರಾಜಸ್ಥಾನ, ಸುರ್ಜೇವಾಲಾಗೆ ಮಧ್ಯ ಪ್ರದೇಶ ಹೊಣೆ

ಕಾಂಗ್ರೆಸ್ ಹೈಕಮಾಂಡ್ ಸೋಮವಾರ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ.
ಶಶಿಕಾಂತ್ ಸೆಂಥಿಲ್
ಶಶಿಕಾಂತ್ ಸೆಂಥಿಲ್

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಸೋಮವಾರ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ.

ಅಧಿಕೃತ ಪ್ರಕಟಣೆಯ ಪ್ರಕಾರ, ರಾಜಸ್ಥಾನಕ್ಕೆ ಮಧುಸೂಧನ್ ಮಿಸ್ತ್ರಿ ಅವರನ್ನು ಹಿರಿಯ ವೀಕ್ಷಕರಾಗಿ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ವೀಕ್ಷಕರಾಗಿ ನೇಮಿಸಲಾಗಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರನ್ನು ಮಧ್ಯಪ್ರದೇಶದ ಹಿರಿಯ ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ಚಂದ್ರಕಾಂತ್ ಹಂದೋರೆ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಉತ್ತರಾಖಂಡ್ ಪಿಸಿಸಿ ಮಾಜಿ ಅಧ್ಯಕ್ಷ ಪ್ರೀತಮ್ ಸಿಂಗ್ ಅವರನ್ನು ಛತ್ತೀಸ್‌ಗಢದ ಹಿರಿಯ ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ಮೀನಾಕ್ಷಿ ನಟರಾಜನ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ತೆಲಂಗಾಣಕ್ಕೆ ಹಿರಿಯ ವೀಕ್ಷಕರಾಗಿ ದೀಪಾ ದಾಸ್ಮುನ್ಶಿ, ವೀಕ್ಷಕರಾಗಿ ಸಿರಿವೆಲ್ಲ ಪ್ರಸಾದ್, ಮಿಜೋರಾಂಗೆ ಸಚಿನ್ ರಾವ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಈ ಐದು ರಾಜ್ಯಗಳ ವಿಧಾನಸಭೆಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಪ್ರಸ್ತುತ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಈ ಎರಡು ರಾಜ್ಯಗಳಲ್ಲಿ ಮತ್ತೆ ಅಧಿಕಾರಕ್ಕೆ ಬರಲು ತೀವ್ರ ಪ್ರಯತ್ನ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com