ಒಡಿಶಾ ರೈಲು ದುರಂತ: ಎರಡು ರೈಲುಗಳ ಲೋಕೋ ಪೈಲಟ್‌ಗಳು, ಗಾರ್ಡ್‌ಗಳಿಗೆ ಗಾಯ

 ಒಡಿಶಾದ ಬಾಲಾಸೋರ್ ಬಳಿ ಮೂರು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಎರಡು ರೈಲುಗಳ ಲೋಕೋ ಪೈಲಟ್‌ಗಳು, ಗಾರ್ಡ್‌ಗಳು  ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ
ಒಡಿಶಾ ರೈಲು ದುರಂತದ ಚಿತ್ರ
ಒಡಿಶಾ ರೈಲು ದುರಂತದ ಚಿತ್ರ

ಬಾಲಸೋರ್:  ಒಡಿಶಾದ ಬಾಲಾಸೋರ್ ಬಳಿ ಮೂರು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಎರಡು ರೈಲುಗಳ ಲೋಕೋ ಪೈಲಟ್‌ಗಳು, ಗಾರ್ಡ್‌ಗಳು  ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಆದಾಗ್ಯೂ ಗೂಡ್ಸ್ ರೈಲಿನ  ಚಾಲಕ ಮತ್ತು ಸಿಬ್ಬಂದಿ ಯಾವುದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೋರಮಂಡಲ್ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್ , ಸಹಾಯಕ ಲೋಕೋ ಪೈಲಟ್ , ಗಾರ್ಡ್ ಮತ್ತು ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಗಾರ್ಡ್ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಗ್ನೇಯ ರೈಲ್ವೆಯ ಖರಗ್‌ಪುರ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ರಾಜೇಶ್ ಕುಮಾರ್ ತಿಳಿಸಿದ್ದಾರೆ.

ಹಳಿ ತಪ್ಪಿದ ಕೋರಮಂಡಲ ಎಕ್ಸ್ ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ಪಕ್ಕದ ಲೈನ್ ನಲ್ಲಿ ನಿಂತಿದ್ದ ಗೂಡ್ಸ್ ರೈಲಿನ ಮೇಲೆ ಬಿದ್ದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com