ಒಡಿಶಾ ರೈಲು ದುರಂತ: ರೈಲ್ವೆ ಸಚಿವರ ರಾಜೀನಾಮೆಗೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಆಗ್ರಹ

288ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಒಡಿಶಾ ರೈಲು ದುರಂತದ ನೈತಿಕ ಹೊಣೆಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜೀನಾಮೆ ನೀಡಬೇಕು ಎಂದು ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಅವರು ಶನಿವಾರ ಒತ್ತಾಯಿಸಿದ್ದಾರೆ.
ಬಾಳಾಸಾಹೇಬ್ ಥೋರಟ್
ಬಾಳಾಸಾಹೇಬ್ ಥೋರಟ್

ಮುಂಬೈ: 288ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಒಡಿಶಾ ರೈಲು ದುರಂತದ ನೈತಿಕ ಹೊಣೆಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜೀನಾಮೆ ನೀಡಬೇಕು ಎಂದು ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಅವರು ಶನಿವಾರ ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಥೋರಟ್, ಕೇಂದ್ರ ಸರ್ಕಾರಕ್ಕೆ ಸೂಕ್ಷ್ಮತೆ ಇಲ್ಲ. ರೈಲುಗಳ ಮುಖಾಮುಖಿ ಡಿಕ್ಕಿ ನಡೆಯುವಂತಹ 'ಕವಚ' ಏನಾಯಿತು ಎಂಬುದನ್ನು ಜನತೆಗೆ ತಿಳಿಸಬೇಕು ಎಂದಿದ್ದಾರೆ.

"ಪ್ರಧಾನಿ ಮೋದಿ ಹೊಸ ರೈಲುಗಳ ಉದ್ಘಾಟನೆ ವೇಳೆಯೂ ರೈಲ್ವೆ ಸಚಿವರು ಕಾಣಲೇ ಇಲ್ಲ. ಈ ಭೀಕರ ಅಪಘಾತದ ನಂತರ ಅವರು ರಾಜೀನಾಮೆ ನೀಡಬೇಕು" ಎಂದು ಥೋರಟ್ ಆಗ್ರಹಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿನ ರಾಜಕೀಯ ವಿಷಯಗಳ ಕುರಿತು ಮಾತನಾಡಿದ ಥೋರಟ್, ಭಾರತೀಯ ಜನತಾ ಪಕ್ಷದ ನಾಯಕಿ ಪಂಕಜಾ ಮುಂಡೆ ಅವರನ್ನು ಕಡೆಗಣಿಸಡಲಾಗುತ್ತಿದೆ. ಆದರೆ ಅವರಿಗೆ ಕಾಂಗ್ರೆಸ್‌ ಬಾಗಿಲು ತೆರೆದಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com